ಕಲಬುರಗಿ: ರಾಜ್ಯದಲ್ಲಿ ಹೃದಯಾಘಾತದ ಸಾವಿನ ಸರಣಿ ಮುಂದುವರೆದಿದೆ. ಕುಳಿತಲ್ಲಿಯೇ ಕುಸಿದು ಬಿದ್ದು ಅಂಗನವಾಡಿ ಕಾರ್ಯಕರ್ತೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಮಲ್ಲಮ್ಮ (59) ಮೃತರು. ಕಲಬುರಗಿ ನಗರದ ಫಿಲ್ಟರ್ ಬೇಡ್ ನ ಗೋಕುಲ್ ನಗರದಲ್ಲಿ ಈ ಘಟನೆ ನಡೆದಿದೆ. ಅಂಗನವಾಡಿ ಕೇಂದ್ರದಲ್ಲಿಯೇ ಮಲ್ಲಮ್ಮ ಕುಳಿತಲ್ಲಿಯೇ ಸಾವನ್ನಪ್ಪಿದ್ದಾರೆ.
ಅಂಗನವಾಡಿ ಸಹಾಯಕಿ ರಜೆಯಲ್ಲಿದ್ದ ಕಾರಣಕ್ಕೆ ಅಂಗನವಾಡಿ ಕಾರ್ಯಕರ್ತೆ ಮಲ್ಲಮ್ಮ ಅಂಗನವಾಡಿಯಲ್ಲಿಯೇ ಇದ್ದರು. ನಿನ್ನೆ ಸಂಜೆಯಾದರೂ ಅಂಗನವಾಡಿ ಬಾಗಿಲು ತೆರೆದೇ ಇತ್ತು. ಅನುಮಾನಬಂದು ಸ್ಥಳೀಯರು ಹೋಗಿ ನೋಡಿದಾಗ ಅಂಗನವಾಡಿ ಕಾರ್ಯಕರ್ತೆ ಕುಳಿತಲ್ಲೇ ಕುಸಿದು ಬಿದ್ದಿರುವುದು ಬೆಳಕಿಗೆ ಬಂದಿದೆ. ತಪಾಸಣೆ ನಡೆಸಿದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಕಲಬುರಗಿ ನಗರದ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.