ಕಲಬುರಗಿ: ರಾಜ್ಯದಲ್ಲಿ ಹೃದಯಾಘಾತದ ಸಾವಿನ ಸರಣಿ ಮುಂದುವರೆದಿದೆ. ಕಲಬುರಗಿಯಲ್ಲಿ 24 ವರ್ಷದ ಯುವಕ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ಜೇವರ್ಗಿ ಪಟ್ಟಣದ ಜೋಪಡಪಟ್ಟಿ ನಿವಾಸಿ ಪಾಷಾ ಖುರೇಷಿ (24) ಮೃತ ಯುವಕ. ಪಾಷಾ ಖುರೇಶಿ ಜೇವರ್ಗಿ ಪಟ್ಟಣದಲ್ಲಿ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಮನೆಯಲ್ಲಿದ್ದಾಗ ಖುರೇಷಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಆತನನ್ನು ಜೇವರ್ಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆಯೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.