HomeKarnatakaಏ. 6ರಿಂದ ಕಲಬುರಗಿ ಹೈಕೋರ್ಟ್ ಕಲಾಪ ಸಮಯ ಬದಲಾವಣೆ

ಏ. 6ರಿಂದ ಕಲಬುರಗಿ ಹೈಕೋರ್ಟ್ ಕಲಾಪ ಸಮಯ ಬದಲಾವಣೆ

ಬೆಂಗಳೂರು: ಬೇಸಿಗೆ ಬಿಸಿಲಿನ ತಾಪ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 6ರಿಂದ ಮೇ ಅಂತ್ಯದವರೆಗೆ ಕಲಬುರಗಿ ಹೈಕೋರ್ಟ್ ಪೀಠಗಳ ಕಾರ್ಯಕಲಾಪ ಸಮಯ ಬದಲಾವಣೆ ಮಾಡಲಾಗಿದೆ.

ಕಲಬುರಗಿ ಹೈಕೋರ್ಟ್ ಪೀಠ ಕಲಾಪ ಬೆಳಗ್ಗೆ 8ರಿಂದ 11 ಗಂಟೆಯವರೆಗೆ ನಂತರ 11:30 ರಿಂದ ಮಧ್ಯಾಹ್ನ 1:30ರ ವರೆಗೆ ನಡೆಯಲಿದೆ. ಶನಿವಾರ ಹೊರತುಪಡಿಸಿ ಕಚೇರಿ ಸಮಯ ಬೆಳಗ್ಗೆ 7:30ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಇರುತ್ತದೆ.

ಕಲಬುರಗಿ ವಿಭಾಗದಡಿ ಬರುವ ಬೀದರ್, ಬಳ್ಳಾರಿ, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯನಗರ, ಯಾದಗಿರಿ, ಬೆಳಗಾವಿ ವಿಭಾಗ ವ್ಯಾಪ್ತಿಯ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಸಿವಿಲ್ ಮತ್ತು ಕ್ರಿಮಿನಲ್, ಕೌಟುಂಬಿಕ ಮತ್ತು ಕಾರ್ಮಿಕ ನ್ಯಾಯಾಲಯದ ಕಾರ್ಯಕಲಾಪದ ಸಮಯವನ್ನು ಏಪ್ರಿಲ್ 4ರಿಂದ ಮೇ ಅಂತ್ಯದವರೆಗೆ ಬದಲಾವಣೆ ಮಾಡಲಾಗಿದ್ದು, ಈ ನ್ಯಾಯಾಲಯಗಳು ಬೆಳಗ್ಗೆ 8ರಿಂದ 11 ಗಂಟೆ ನಂತರ 11:30 ರಿಂದ ಮಧ್ಯಾಹ್ನ 1:30ರ ವರೆಗೆ ನಡೆಯಲಿವೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular