HomeKarnatakaBIG NEWS: ಹನಿಟ್ರ್ಯಾಪ್ ಖೆಡ್ಡಾಗೆ ಬಿದ್ದ ಪೊಲೀಸರು, ಅಧಿಕಾರಿಗಳು, ಉದ್ಯಮಿಗಳು; 8 ಆರೋಪಿಗಳ ವಿರುದ್ಧ ಪ್ರಕರಣ...

BIG NEWS: ಹನಿಟ್ರ್ಯಾಪ್ ಖೆಡ್ಡಾಗೆ ಬಿದ್ದ ಪೊಲೀಸರು, ಅಧಿಕಾರಿಗಳು, ಉದ್ಯಮಿಗಳು; 8 ಆರೋಪಿಗಳ ವಿರುದ್ಧ ಪ್ರಕರಣ ದಾಖಲು

ಕಲಬುರ್ಗಿ: ಪೊಲೀಸರು, ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನೇ ಟಾರ್ಗೆಟ್ ಮಾಡಿ ಹನಿ ಟ್ರ್ಯಾಪ್ ಖೆಡ್ಡಾಗೆ ಕೆಡವುತ್ತಿದ್ದ ಗುಂಪಿನ ವಿರುದ್ಧ ಕಲಬುರ್ಗಿಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರ್ಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ದಲಿತ ಸೇನೆಯ ಹಣಮಂತ ಯಳಸಂಗಿ, ಪ್ರಭು ಹಿರೇಮಠ, ರಾಜು ಲೆಂಗಟಿ, ಶ್ರೀಕಾಂತ್ ರೆಡ್ಡಿ, ಮಂಜು ಭಂಡಾರಿ ಸೇರಿದತೆ 8 ಜನರ ವಿರುದ್ಧ ಹನಿಟ್ರ್ಯಾಪ್ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.

ಸಾಮಾಜಿಕ ಜಾಲತಾಣಗಳ ಮೂಲಕ ಯುವತಿಯರನ್ನು ಪರಿಚಿಸಿಕೊಂಡು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಯುವತಿಯರಿಗೆ ಹಣದ ಆಮಿಷವೊಡ್ಡಿ, ಬಳಿಕ ಯುವತಿಯರನ್ನು ಹನಿಟ್ರ್ಯಾಪ್ ಗೆ ಬಳಸಿಕೊಳ್ಳುತ್ತಿದ್ದರು. ಹತ್ತಕ್ಕೂ ಹೆಚ್ಚು ಯುವತಿಯರನ್ನು ಈ ರೀತಿ ಬಳಸಿಕೊಂಡಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೊಡ್ಡದೊಡ್ಡ ಉದ್ಯಮಿಗಳು, ಸರ್ಕಾರಿ ಅಧಿಕಾರಿಗಳನ್ನು ಬಲೆಗೆ ಬೀಳಿಸಿಕೊಂಡು ಫೋಟೊ, ವಿಡಿಯೋ ರೆಕಾರ್ಡ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದರು. ಇದೇ ರೀತಿ ಆರೋಪಿಗಳು ಕಮಲಾಪುರ ಪೊಲೀಸ್ ಠಾಣೆಯ ಪೇದೆಯನ್ನು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ, ಬ್ಲ್ಯಾಕ್ ಮೇಲ್ ಮಾಡಿ 7 ಲಕ್ಷ ರೂಪಾಯಿ ಹಣ ವಸೂಲಿ ಮಾಡಿದ್ದರು. ಇದೇ ರೀತಿ ಉದ್ಯಮಿಯೊಬ್ಬರಿಂದ 40 ಲಕ್ಷ ರೂಪಾಯಿ ವಸೂಲಿ ಮಾಡಿದ್ದಾರೆ. ಆರೋಪಿಗಳು ಓರ್ವ ಯುವತಿಗೆ ಗರ್ಭಪಾತವನ್ನೂ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇದೀಗ 8 ಅರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular