HomeKarnatakaBREAKING: ಹಾಜರಾತಿ ನೀಡಲು ಲಂಚ ಸ್ವೀಕಾರ: ತಡರಾತ್ರಿ ಲೋಕಾಯುಕ್ತ ವಶಕ್ಕೆ ಹಾಸ್ಟೆಲ್ ವಾರ್ಡನ್

BREAKING: ಹಾಜರಾತಿ ನೀಡಲು ಲಂಚ ಸ್ವೀಕಾರ: ತಡರಾತ್ರಿ ಲೋಕಾಯುಕ್ತ ವಶಕ್ಕೆ ಹಾಸ್ಟೆಲ್ ವಾರ್ಡನ್

ಕಲಬುರಗಿ: ಲಂಚ ಪಡೆಯುತ್ತಿದ್ದ ಹಾಸ್ಟೆಲ್ ವಾರ್ಡನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಲಬುರಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ವಾರ್ಡನ್ ಶಿವಶರಣಪ್ಪ ಅವರನ್ನು ವಶಕ್ಕೆ ಪಡೆಯಲಾಗಿದೆ.

ಅಡುಗೆ ಸಹಾಯಕರಿಗೆ ತಿಂಗಳ ಹಾಜರಾತಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಅಡುಗೆ ಸಹಾಯಕ ಶ್ರೀಮಂತ ಅವರ ಬಳಿ 20,000 ರೂ. ಲಂಚ ಕೇಳಿದ್ದರು. ಕಚೇರಿಯಲ್ಲಿ 15,000 ರೂ. ಮುಂಗಡ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಣ ಪಡೆಯುವಾಗಲೇ ತಡರಾತ್ರಿ ಹಾಸ್ಟೆಲ್ ವಾರ್ಡನ್ ಶಿವಶರಣಪ್ಪ ಅವರನ್ನು ವಶಕ್ಕೆ ಪಡೆಯಲಾಗಿದೆ. ಲೋಕಾಯುಕ್ತ ಡಿವೈಎಸ್ಪಿ ಗೀತಾ ಬೆನಾಳ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular