ಕಲಬುರಗಿ: ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸುತ್ತಿರುವಾಗಲೇ ಪ್ರತ್ಯೇಕ ರಾಜ್ಯದ ಕೂಗು ಆರಂಭವಾಗಿದೆ. ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಹಲವರು ಪ್ರತಿಭಟನೆ ನಡೆಸಿದ್ದಾರೆ.
ಕಲಬುರಗಿಯ ಜಗತ್ ವೃತ್ತದಲ್ಲಿ ಜಮಾವಣೆಗೊಂಡಿರುವ ಹೋರಾಟಗಾರರು, ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಪ್ರತ್ಯೇಕ ಧ್ವಜಾರೋಹಣ ನೆರವೇರಿಸಲು ಹೋರಾಟಗಾರರು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಹೋರಾಟಗಾರರನ್ನು ತಡೆದಿದ್ದಾರೆ.
ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ 20ಕ್ಕೂ ಹೆಚ್ಚು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
