ಕಲಬುರಗಿ: ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರಿನಲ್ಲಿ ದುರಂತ ಸಂಭವಿಸಿದೆ. ವ್ಯಕ್ತಿಯೋರ್ವ ಕಾಲುಜಾರಿ ನದಿಗೆ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.
ಬಾಗೇಶ್ ನೀರಿನಲ್ಲಿ ಕೊಚ್ಚಿ ಹೋಗಿರುವ ವ್ಯಕ್ತಿ. ನವರಾತ್ರಿ ಹಿನ್ನೆಲೆಯಲ್ಲಿ ಬೆಡ್ ಶೀಟ್ ತೊಳೆಯಲೆಂದು ನದಿಗೆ ಹೋಗಿದ್ದರು. ಈ ವೇಳೆ ಕಾಲು ಜಾರಿ ನದಿಗೆ ಬಿದ್ದಿದ್ದಾರೆ. ನೋಡ ನೋಡುತ್ತಿದಂತೆಯೇ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದು ಬಾಗೇಶ್ ಗಾಗಿ ನೀರಿನಲ್ಲಿ ಶೋಧ ನಡೆಸಲಾಗುತ್ತಿದೆ.