HomeUncategorizedBREAKING: ಕಲಬುರಗಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

BREAKING: ಕಲಬುರಗಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಕಲಬುರಗಿ: ವ್ಯಕ್ತಿಯೋರ್ವ ರಿವಾಲ್ವರ್ ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಕಲಬುರಗಿಯ ಶಿವಶಕ್ತಿ ನಗರದಲ್ಲಿ ನಡೆದಿದೆ.

ಖಂಡುರಾವ್ ದವಳಜಿ (36) ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡವರು. ತನ್ನದೇ ರಿವಾಲ್ವರ್ ನಿಂದ ಶೂಟ್ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಕಲಬುರಗಿ ಚೌಕ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖಂಡುರಾವ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ಮುಂದುವರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular