ಕಲಬುರಗಿ: ಹಾಡಹಗಲೇ ವೃದ್ಧ ರೈತರೊಬ್ಬರನ್ನು ದುಷ್ಕರ್ಮಿಗಳು ತಲ್ವಾರ್ ನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಶಿವರಾಮ್ ಮಾಲಿ ಪಾಟೀಲ್ (65) ಕೊಲೆಯಾದ ದುರ್ದೈವಿ. ಸಿಂದು ಬೆಳಿಗ್ಗೆ ಜಮೀನಿಗೆ ಹೋಗಿ ಬರುತ್ತಿದ್ದ ಶಿವರಾಮ್ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆಗೈದು ಪರಾರಿಯಾಗಿದ್ದಾರೆ.
ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಡಿಸಿಪಿ ಕನ್ನಿಕಾ ಸಿಕ್ರಿವಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.