ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ನಲ್ಲಿ ನಡೆದಿದೆ.
ಇಲ್ಲಿನ ಕೋಡ್ಲಾ-ಬೆನಕನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಿಮೆಂಟ್ ಕಂಪನಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲ ಮಾಡುತ್ತಿದ್ದ ಕಾರ್ಮಿಕರ ನಡುವೆ ಅಡುಗೆ ವಿಚಾರವಾಗಿ ಜಗಳ ಶುರುವಾಗಿದೆ. ಗಲಾಟೆ ವಿಪರೀತಕ್ಕೆ ಹೋಗಿದ್ದು, ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಜಯ್ ನಶಾದ್ ಎಂಬಾತ ಇಬ್ಬರು ಕಾರ್ಮಿಕರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಛತ್ತೀಸ್ ಗಢ ಮೂಲದ ಗೋಆಲ ಪಟೇಲ್ (31) ಹಾಗೂ ಗೋಪಾಲ ವರ್ಮಾ (29) ಮೃತರು. ಸೇಡಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.