ಮದುವೆಗೆ ಸಿದ್ಧವಾಗಿದ್ದ ಯುವಕನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಪ್ರಾಣಕ್ಕೆ ಕುತ್ತು ತಂತು ವಿವಾಹಿತೆ ಜೊತೆಗಿನ ಅನೈತಿಕ ಸಂಬಂಧ

ಇದೇ ಜೂನ್ 7ರಂದು ಮದುವೆಯಾಗಬೇಕಿದ್ದ ಯುವಕ ಜೂನ್ 2ರಂದು ಹತ್ಯೆಯಾಗಿದ್ದು, ಕೃತ್ಯ ನಡೆದ ಕೇವಲ 48 ಗಂಟೆಗಳ ಒಳಗಾಗಿ ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ. ತನಿಖೆ ವೇಳೆ ಬೆಚ್ಚಿ ಬೀಳಿಸುವ ಮಾಹಿತಿ ಬಹಿರಂಗವಾಗಿದ್ದು, ಹತ್ಯೆಗೆ ಅನೈತಿಕ ಸಂಬಂಧವೇ ಕಾರಣ ಎಂಬುದು ತಿಳಿದು ಬಂದಿದೆ.

ಧಾರವಾಡ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು ಜೂನ್ 2ರಂದು, ನಿಂಗಪ್ಪ ಎಂಬಾತನನ್ನು ತೋಟದ ಮನೆಯಲ್ಲಿ ಹತ್ಯೆ ಮಾಡಲಾಗಿತ್ತು. ಈತನ ವಿವಾಹ ಜೂನ್ 7 ರಂದು ನಡೆಯಬೇಕಿದ್ದ ಹಿನ್ನೆಲೆಯಲ್ಲಿ ಅದಕ್ಕೂ ಮುನ್ನ ನಡೆದ ಈ ಕೊಲೆ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿತ್ತು.

ಪ್ರಕರಣ ದಾಖಲಿಸಿಕೊಂಡಿದ್ದ ಕಲಘಟಗಿ ಪೊಲೀಸರಿಗೆ ತನಿಖೆ ವೇಳೆ ಮೃತ ನಿಂಗಪ್ಪ, ಜಿನ್ನೂರು ಗ್ರಾಮದ ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎಂಬ ವಿಷಯ ತಿಳಿದು ಬಂದಿದೆ. ಹೆಚ್ಚಿನ ವಿಚಾರಣೆ ನಡೆಸಿದಾಗ ಮಹಿಳೆಯ ಪತಿ ಮುತ್ತಪ್ಪ ಹಾಗೂ ಆತನ ಸಹೋದರ ವೀರಭದ್ರ ಈ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ.

ತನ್ನ ಪತ್ನಿ, ನಿಂಗಪ್ಪನ ಜೊತೆ ಅನೈತಿಕ ಸಂಬಂಧ ಹೊಂದಿರುವ ವಿಚಾರ ತಿಳಿದ ಮುತ್ತಪ್ಪ ತನ್ನ ಸಹೋದರನ ಜೊತೆ ಮಾತುಕತೆ ನಡೆಸಿ ಬಳಿಕ ಕಲಘಟಗಿ ತಾಲೂಕಿನ ಜಿನ್ನೂರು ಗ್ರಾಮದ ತೋಟದ ಮನೆಯಲ್ಲಿ ನಿಂಗಪ್ಪನ ಕಣ್ಣಿಗೆ ಕಾರದಪುಡಿ ಎರಚಿ ಕತ್ತು ಹಿಸುಕಿ ಕೊಲೆ ಮಾಡಿದ್ದ ಎಂಬುದು ಬಹಿರಂಗವಾಗಿದೆ ಇದೀಗ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read