HomeKarnatakaಗುಡ್ಡದಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆ, ಯುವಕನ ಶವ ಪತ್ತೆ

ಗುಡ್ಡದಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆ, ಯುವಕನ ಶವ ಪತ್ತೆ

ಕಲಬುರಗಿ: ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಸಂಕನೂರು ಗ್ರಾಮದ ಹೊರ ವಲಯದ ಗುಡ್ಡದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಯುವಕ ಮತ್ತು ಮಹಿಳೆಯ ಶವ ಪತ್ತೆಯಾಗಿದೆ.

ಸಂಕನೂರು ಗ್ರಾಮದ ಹೊರವಲಯದ ಗುಡ್ಡದಲ್ಲಿ ಘಟನೆ ನಡೆದಿದೆ. ಕೊಳೆತ ಸ್ಥಿತಿಯಲ್ಲಿ ಶರಣಮ್ಮ(32) ಮತ್ತು ಬಸವರಾಜ(21) ಶವ ಪತ್ತೆಯಾಗಿದೆ. ಇಬ್ಬರೂ ಪ್ರೇಮಿಗಳೆಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅರಣ್ಯ ರಕ್ಷಣೆ ನಮ್ಮೆಲ್ಲರ ಹೊಣೆ: ಜಿಲ್ಲಾ ನ್ಯಾಯಾಧೀಶ ಸಿದ್ದಲಿಂಗ ಪ್ರಭು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳ್ಳಾರಿ: ಅರಣ್ಯ ಮತ್ತು ವನ್ಯಜೀವಿಗಳನ್ನು ರಕ್ಷಿಸುತ್ತೇವೆ, ಅದನ್ನು ನಾಶ ಮಾಡಲು ಬಿಡುವುದಿಲ್ಲ ಎಂಬ ಪ್ರತಿಜ್ಞೆಯನ್ನು ನಾವೆಲ್ಲರೂ ಸ್ವೀಕರಿಸಬೇಕು. ಆಗ ಮಾತ್ರ ಪ್ರಕೃತಿ ರಕ್ಷಣೆಗಾಗಿ ಪ್ರಾಣತ್ಯಾಗ ಮಾಡಿದ ಅರಣ್ಯ ಹುತಾತ್ಮರ ಬಲಿದಾನಕ್ಕೆ ಸೂಕ್ತ ಸಾರ್ಥಕತೆ ದೊರೆಯುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಸಿದ್ಧಲಿಂಗ ಪ್ರಭು ಅವರು ಹೇಳಿದರು.

ಶುಕ್ರವಾರ ನಗರದ ಅರಣ್ಯ ಇಲಾಖೆ ಕಚೇರಿಯಲ್ಲಿ ಆಯೋಜಿಸಿದ್ದ ‘ಅರಣ್ಯ ಹುತಾತ್ಮರ ದಿನಾಚರಣೆ’ಯಲ್ಲಿ ಭಾಗವಹಿಸಿ, ಹುತಾತ್ಮ ಸ್ಮಾರಕಕ್ಕೆ ಪುಷ್ಪಗುಚ್ಛ ನಮಸ್ಕರಿಸಿ ಅವರು ಮಾತನಾಡಿದರು.

ಅರಣ್ಯ ಯೋಧರಿಂದಾಗಿ ಇಂದಿಗೂ ಪ್ರಕೃತಿಯ ಜೀವಸಂಕುಲಗಳಿಗೆ ಸೂಕ್ತ ಆಶ್ರಯ ಸಿಕ್ಕಿದೆ. ಪರಿಸರದ ಸಮತೋಲನ ಕಾಯ್ದುಕೊಳ್ಳಲು ಕಾಡಿನ ರಕ್ಷಣೆ ಅತ್ಯಗತ್ಯ ಎಂದು ಅವರು ಹೇಳಿದರು.

ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಮಾತನಾಡಿ, ಅರಣ್ಯದಲ್ಲಿ ಕಾರ್ಯನಿರ್ವಹಿಸುವುದು ಸವಾಲಿನ ಕೆಲಸ. ಬೇಟೆಗಾರರು ಹಾಗೂ ಕಾಡುಗಳ್ಳರ ವಿರುದ್ಧ ಹೋರಾಡುವ ಅರಣ್ಯ ಸಿಬ್ಬಂದಿಗೆ ಸಾರ್ವಜನಿಕರು ಮತ್ತು ಪರಿಸರ ಪ್ರಿಯರು ಬೆಂಬಲವಾಗಿ ನಿಲ್ಲಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಬಳ್ಳಾರಿ ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕೆ.ಎನ್. ಬಸವರಾಜ್ ಅವರು ಮಾತನಾಡಿ, ದೇಶ ಹಾಗೂ ರಾಜ್ಯದಲ್ಲಿ ಒಟ್ಟು 65 ಅರಣ್ಯ ಸಿಬ್ಬಂದಿ ಕರ್ತವ್ಯದ ವೇಳೆ ಹುತಾತ್ಮರಾಗಿದ್ದಾರೆ. ಕಳೆದ 25 ವರ್ಷಗಳಲ್ಲಿ ವನ್ಯಜೀವಿ-ಮಾನವ ಸಂಘರ್ಷ ಹೆಚ್ಚುತ್ತಿದ್ದು, ಸಿಬ್ಬಂದಿ ಕರ್ತವ್ಯದ ಜೊತೆಗೆ ತಮ್ಮ ಕುಟುಂಬಕ್ಕೂ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಅರಣ್ಯವನ್ನು ಸಂರಕ್ಷಿಸಿದರೆ ಮಾತ್ರ ಮಾನವ ಕುಲದ ಜೀವನ ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಹುತಾತ್ಮರಿಗೆ ಗೌರವ:

ಮೃತರಾದ ಅರಣ್ಯ ಯೋಧರ ಸ್ಮರಣಾರ್ಥ ಪೊಲೀಸ್ ಸಿಬ್ಬಂದಿ ಕುಶಾಲುತೋಪು ಹಾರಿಸಿ, ಬಳಿಕ ಎರಡು ನಿಮಿಷಗಳ ಮೌನಾಚರಣೆ ಮೂಲಕ ಗೌರವ ಸಲ್ಲಿಸಿದರು.

ಈ ವೇಳೆ ಸಾಮಾಜಿಕ ಅರಣ್ಯ ಉಪ ಸಂರಕ್ಷಣಾಧಿಕಾರಿ ಮಾರ್ಕಾಂಡೇಯ, ಸಂತೋಷ್ ನಾಯಕ್ ಸೇರಿದಂತೆ ಇಲಾಖೆಯ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು. ಎಆರ್‌ಎಫ್‌ಒ ಪ್ರಾಣೇಶ್ ಕಾರ್ಯಕ್ರಮ ನಿರೂಪಿಸಿದರು.

ಮೆಸ್ಕಾಂ ಜನಸಂಪರ್ಕ ಸಭೆ

ಶಿವಮೊಗ್ಗ: ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ 11 ರಿಂದ 01 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಅಗತ್ಯ ಮಾಹಿತಿಗಾಗಿ ದೂ. ಸಂ.: 9448289520 ನ್ನು ಸಂಪರ್ಕಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular