HomeKarnatakaBREAKING : ಕಲಬುರಗಿ ಜಿಲ್ಲಾ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ ; ಕೈದಿ ಬಳಿ...

BREAKING : ಕಲಬುರಗಿ ಜಿಲ್ಲಾ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ ; ಕೈದಿ ಬಳಿ ಮೊಬೈಲ್ ಪತ್ತೆ

ಕಲಬುರಗಿ: ಜೈಲಿನ ಬ್ಯಾರಕ್‌ ನಂ.6ರಲ್ಲಿ ಮೊಬೈಲ್‌ ಪತ್ತೆಯಾಗಿದ್ದು, ಪೊಲೀಸ್‌ ಆಯುಕ್ತ ಡಾ. ಶರಣಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಜೈಲಿನೊಳಗೆ ಕೈದಿಗಳು ಮೊಬೈಲ್‌ ಸೇರಿದಂತೆ ನಿಷೇಧಿತ ವಸ್ತುಗಳನ್ನು ಬಚ್ಚಿಟ್ಟುಕೊಳ್ಳುತ್ತಿರುವ ಹಿನ್ನೆಲೆ ತಪಾಸಣೆ ನಡೆಸಲಾಗಿದ್ದು, ಈ ವೇಳೆ ಮೊಬೈಲ್ ಪತ್ತೆಯಾಗಿದೆ.

ಕಲಬುರಗಿ ಜೈಲಿನಲ್ಲಿ ಪೊಲೀಸ್ ಆಯುಕ್ತ ಡಾ. ಶರಣಪ್ಪ ಅವರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದು, ಜೈಲಿನ ಬ್ಯಾರಕ್‌ ನಂ.6ರಲ್ಲಿ ಮೊಬೈಲ್‌ ಫೋನ್‌ ಪತ್ತೆಯಾಗಿದೆ. ಜೈಲಿನೊಳಗೆ ಕೈದಿಗಳು ಮೊಬೈಲ್‌ ಸೇರಿದಂತೆ ನಿಷೇಧಿತ ವಸ್ತುಗಳನ್ನು ಎಲ್ಲೆಲ್ಲಿ ಬಚ್ಚಿಟ್ಟುಕೊಳ್ಳುತ್ತಿದ್ದಾರೆ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ತಪಾಸಣೆ ನಡೆಸಿದ್ದಾರೆ.

ದಾಳಿ ವೇಳೆ ಬ್ಯಾರಕ್‌ ನಂ.6ರಲ್ಲಿ ಮೊಬೈಲ್‌ ಪತ್ತೆಯಾಗಿದ್ದು, ಈ ಸಂಬಂಧ ಫರಹತಾಬಾದ್ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಜೈಲಿನ ಭದ್ರತಾ ವ್ಯವಸ್ಥೆ ಹಾಗೂ ಕೈದಿಗಳ ಚಟುವಟಿಕೆಗಳ ಬಗ್ಗೆ ಪೊಲೀಸರು ಹೆಚ್ಚಿನ ನಿಗಾ ವಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೈಲು ಆವರಣದಲ್ಲಿ ಮೊಬೈಲ್‌ ಬಳಕೆ ಸೇರಿದಂತೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಈ ಹಿಂದೆಯೇ ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ ನೀಡಿತ್ತು. ಇದರ ಬೆನ್ನಲ್ಲೇ ಜೈಲುಗಳಲ್ಲಿ ಅಕ್ರಮವಾಗಿ ಮೊಬೈಲ್‌ ಬಳಕೆಯಾಗುತ್ತಿರುವುದನ್ನು ತಡೆಯಲು ಅಧಿಕಾರಿಗಳು ತಪಾಸಣೆ ಹಾಗೂ ನಿಗಾ ವ್ಯವಸ್ಥೆಯನ್ನು ಬಿಗಿಗೊಳಿಸಿದ್ದಾರೆ.

ಭದ್ರಾ ಕಾಡಾ ಕಚೇರಿಯಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಆಡಳಿತಾಧಿಕಾರಿಗಳು ಹಾಗೂ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

​ಶಿವಮೊಗ್ಗ : ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ (ಕಾಡಾ) ಕೇಂದ್ರ ಕಚೇರಿಯಲ್ಲಿ ದಿನಾಂಕ 09 ಸೆಪ್ಟೆಂಬರ್ 2026ರಂದು ನೀರು ಬಳಕೆದಾರರ ಸಹಕಾರ ಸಂಘಗಳ ಆಡಳಿತಾಧಿಕಾರಿಗಳು, ಪದಾಧಿಕಾರಿಗಳು ಹಾಗೂ ಸದಸ್ಯರುಗಳಿಗಾಗಿ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

​ಕಾರ್ಯಾಗಾರದಲ್ಲಿ ಸಹಕಾರ ಸಂಘಗಳ ಜಂಟಿ ನಿಬಂಧಕರು ಹಾಗೂ ಭೂ ಅಭಿವೃದ್ಧಿ ಅಧಿಕಾರಿ (ಸಹಕಾರ) ಡಾ. ನಾಗೇಶ್ ಎಸ್. ಡೋಂಗರೆ ಅವರು ನೀರು ಬಳಕೆದಾರ ಸಹಕಾರ ಸಂಘಗಳ ಆಡಳಿತಾಧಿಕಾರಿಗಳಿಗೆ ಅವರ ಕರ್ತವ್ಯ ಮತ್ತು ಜವಾಬ್ದಾರಿಗಳ ಕುರಿತು ಸಮಗ್ರ ತರಬೇತಿ ನೀಡಿದರು.

​ರೈತರು ಒಗ್ಗಟ್ಟಿನಿಂದ ಬೆಳೆ ಬೆಳೆಯಲು ಕಾಡಾ ಅಧ್ಯಕ್ಷರ ಕರೆ:

ನಂತರ ಕಾಡಾ ಅಧ್ಯಕ್ಷರಾದ ಕೆ.ಪಿ. ಅಂಶುಮಂತ್ ಅವರ ಅಧ್ಯಕ್ಷತೆಯಲ್ಲಿ ದಾವಣಗೆರೆ, ಚನ್ನಗಿರಿ ಹಾಗೂ ಹರಿಹರ ತಾಲೂಕುಗಳ ನೀರು ಬಳಕೆದಾರರ ಸಹಕಾರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರುಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ನಡೆಯಿತು.

​ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ಅಧ್ಯಕ್ಷರು, “ನೀರಾವರಿ ಕ್ಷೇತ್ರದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಜವಾಬ್ದಾರಿ ಹಿರಿದಾದುದು. ರೈತರು ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳುವ ಜೊತೆಗೆ ನೀರನ್ನು ಮಿತವಾಗಿ ಬಳಸುವುದನ್ನು ರೂಢಿಸಿಕೊಳ್ಳಬೇಕು. ಸಹಕಾರ ಸಂಘಗಳನ್ನು ವಿವಿಧೋದ್ದೇಶ ಸಂಘಗಳನ್ನಾಗಿ ಪರಿವರ್ತಿಸಿ, ಅವುಗಳಿಂದ ದೊರೆಯುವ ಸೌಲಭ್ಯಗಳನ್ನು ಗರಿಷ್ಠ ಮಟ್ಟದಲ್ಲಿ ಪಡೆದುಕೊಳ್ಳಬೇಕು ಹಾಗೂ ರೈತರೆಲ್ಲರೂ ಒಗ್ಗಟ್ಟಿನಿಂದ ಬೆಳೆ ಬೆಳೆಯಬೇಕು” ಎಂದು ಕರೆ ನೀಡಿದರು.

​ಕೃಷಿ ಯಂತ್ರೋಪಕರಣಗಳ ವಿತರಣೆ:

ಕಾರ್ಯಕ್ರಮದ ಅಂಗವಾಗಿ ಅರ್ಹ ನೀರು ಬಳಕೆದಾರ ಸಹಕಾರ ಸಂಘಗಳಿಗೆ ಕಾಡಾ ಪ್ರಾಧಿಕಾರದ ವತಿಯಿಂದ ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಯಿತು.

​ಈ ಸಂದರ್ಭದಲ್ಲಿ ಕಾಡಾ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಇಂಜಿನಿಯರ್ ಆರ್. ಸತೀಶ್, ಭೂ ಅಭಿವೃದ್ಧಿ ಅಧಿಕಾರಿ (ತಾಂತ್ರಿಕ) ಪ್ರಶಾಂತ್ ಕೆ., ಉಪಆಡಳಿತಾಧಿಕಾರಿ (ಪ್ರ) ಶ್ರೀನಿವಾಸ್ ಚಿಂತಾಲ, ಭೂ ಅಭಿವೃದ್ಧಿ ಅಧಿಕಾರಿ (ಕೃಷಿ), ಭದ್ರಾ ಕಾಡಾ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಹಾಗೂ ದಾವಣಗೆರೆ ವಿಭಾಗದ ನೀರಾವರಿ ನಿಗಮದ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಉಪಸ್ಥಿತರಿದ್ದರು

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular