ಕಲಬುರಗಿ: ಕಲಬುರಗಿ ಚಿನ್ನದಂಗಡಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೆಲ ದಿನಗಳ ಹಿಂದೆ ಹಾಡಹಗಲೇ ಕಲಬುರಗಿ ಚಿನ್ನದಂಗಡಿಯಲ್ಲಿ ದರೋಡೆ ನಡೆದಿತ್ತು. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಚೌವ್ಹಾಣ್, ಫಾರೂಕ್ ಮಲ್ಲಿಕ್ ಹಾಗೂ ಸೋಹೆಲ್ ಎಂದು ಗುರುತಿಸಲಾಗಿದೆ.
ಬಂಧಿತರು ಪಶ್ಚಿಮ ಬಂಗಾಳ ಹಗೂ ಮುಂಬೈ ಮೂಲದವರು ಎಂದು ತಿಳಿದುಬಂದಿದೆ. ಆರೋಪಿಗಳಿಂದ 2.86ಕೆಜಿಗೂ ಅಧಿಕ ಚಿನ್ನಾಭರಣ ಜಪ್ತಿ ಮಾಡಲಾಗಿದೆ.
TAGGED:ಕಲಬುರಗಿ