ಕಲಬುರಗಿ: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್.ಎಸ್.ಎಸ್ ಪಥಸಂಚಲನಕ್ಕೆ ಅವಕಾಶ ನೀಡುವ ವಿಚಾರವಾಗಿ ಹೈಕೋರ್ಟ್ ನಿರ್ದೇಶನದಂತೆ ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಶಾಂತಿ ಸಭೆ ನಡೆಸಲಾಗಿತ್ತು. ಆದರೆ ಸಭೆಯಲ್ಲಿ ವಾಗ್ವಾದ, ಗಲಾಟೆ ನಡೆದಿದ್ದು, ಯಾವುದೇ ಒಪ್ಪಂದಕ್ಕೆ ಬರದೇ ಸಭೆ ಮುಕ್ತಾಯಗೊಂಡಿದೆ.
ಶಾಂತಿ ಸಭೆಯಲ್ಲಿ ಎಲ್ಲಾ ಸಂಘಟನೆಗಳಿಗೂ ಹತ್ತು ನಿಮಿಷ ಮಾತನಾಡಲು ಅವಕಾಶ ನೀಡಲಾಗಿತ್ತು. ಈ ವೇಳೆ ಬಿಜೆಪಿ ಮುಖಂಡ ಅಂಬರಾಯ ಅಷ್ಟಗಿ ಹಾಗೂ ದಲಿತ ಸಂಘಟನೆಗಳ ನಡುವೆ ಮಾತಿಗೆ ಮಾತು ಬೆಳೆದು ವಾಗ್ವಾದ ನಡೆದಿದೆ.
ಆರ್ ಎಸ್ ಎಸ್, ಭಾರತೀಯ ದಲಿಯ ಪ್ಯಾಂಥರ್ಸ್, ಭೀಮ್ ಆರ್ಮಿ, ರಾಜ್ಯ ಯುವ ಘಟಕ, ಎಸ್ ಟಿ ಹೋರಾಟ ಸಮಿತಿ, ರಾಜ್ಯ ರೈತ ಸಂಘ, ಹಸಿರು ಸೇನೆ ಕ್ರಿಶ್ಚಿಯನ್ ಹೌಸ್ ಸಮಿತಿ ಸೇರಿದಂತೆ ಹಲವು ಸಂಘಟನೆಗಳು ಸಭೆಯಲ್ಲಿ ಭಾಗಿಯಾಗಿದ್ದವು. ಬಿಜೆಪಿ ಮುಖಂಡ ಅಂಬರಾಯ ಅಷ್ಟಗಿ ಹಾಗೂ ದಲಿತ ಪ್ಯಾಂಥರ್ಸ್ ಘಟನೆ ಸದಸ್ಯರ ನಡುವೆ ವಾಗ್ವಾದ ನಡೆದು ಗಲಾಟೆಯಾಗಿದೆ. ಇದರಿಂದಾಗಿ ಸಭೆಯಲ್ಲಿ ಆರ್.ಎಸ್.ಎಸ್ ಪಥಸಂಚನದ ಬಗ್ಗೆ ಯಾವುದೇ ನಿರ್ಧಾರಕ್ಕೆ ಬರಲಾಗಿಲ್ಲ. ಸಭೆಯಲ್ಲಿ ಒಪ್ಪಂದಕ್ಕೆ ಬಾರದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಕೋರ್ಟ್ ಗೆ ಸಭೆಯಲ್ಲಾದ ಬೆಳವಣಿಗೆಯನ್ನೇ ವರದಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
