HomeKarnatakaBREAKING : ರಾಜ್ಯದಲ್ಲಿ ಮತ್ತೊಂದು ATM ದರೋಡೆ : ಗ್ಯಾಸ್ ಕಟರ್ ಬಳಸಿ 18 ಲಕ್ಷ...

BREAKING : ರಾಜ್ಯದಲ್ಲಿ ಮತ್ತೊಂದು ATM ದರೋಡೆ : ಗ್ಯಾಸ್ ಕಟರ್ ಬಳಸಿ 18 ಲಕ್ಷ ದೋಚಿ ಪರಾರಿಯಾದ ಖದೀಮರು.!

ಕಲಬುರಗಿ: ರಾಜ್ಯದಲ್ಲಿ ಮತ್ತೊಂದು ಎಟಿಎಂ ದರೋಡೆ ಪ್ರಕರಣ ನಡೆದಿದೆ. ಎಸ್ ಬಿಐ ಎಟಿಎಂ ಒಡೆದು ೧೮ ಲಕ್ಷ ರೂಪಾಯಿ ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಕಲಬುರಗಿಯ ಪೂಜಾರಿ ಚೌಕ್ ನಲ್ಲಿ ಎಸ್ ಬಿಐ ಎಟಿಎಂನಲ್ಲಿ ಕಳ್ಳರು ಹಣ ದೋಚಿ ಎಸ್ಕೇಪ್ ಆಗಿದ್ದಾರೆ. ಗ್ಯಾಸ್ ಕಟರ್ ಬಳಸಿ ಎಟಿಎಂ ಯಂತ್ರ ಒಡೆದು 18 ಲಕ್ಷ ರೂಪಾಯಿ ಕಳ್ಳತನ ಮಾಡಲಾಗಿದೆ. ಇಂದು ನಸುಕಿನಜಾವ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ನಿನ್ನೆ ಸಂಜೆ 6 ಗಂಟೆಗೆ ಬ್ಯಾಂಕ್ ಸಿಬ್ಬಂದಿ ಎಟಿಎಂಗೆ ಹಣ ಹಾಕಿದ್ದರು. ಭದ್ರತಾ ಸಿಬ್ಬಂದಿ ಇಲ್ಲದಿರುವುದನ್ನು ಗಮನಿಸಿ, ಸಿಸಿಕ್ಯಾಮರಾಗೆ ಬ್ಲ್ಯಾಕ್ ಸ್ಪ್ರೇ ಮಾಡಿ ದರೋಡೆಕೋರರು ಹಣ ದೋಚಿ ಪರಾರಿಯಾಗಿದ್ದಾರೆ. ಕಲಬುರಗಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular