ಕಲಬುರಗಿ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿಕ್ಷಕರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಒಳ ಮೀಸಲಾತಿ ಸಮೀಕ್ಷೆಗೆ ತೆರಳಿದ್ದ ಶಿಕ್ಷಕ ಗಣತಿ ಕಾರ್ಯದಲ್ಲಿ ತೊಡಗಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚತ್ರಸಾಲ ಗ್ರಾಮದಲ್ಲಿ ನಡೆದಿದೆ.
ಚಿತ್ರಸಾಲ ಪ್ರಾಥಮಿಕ ಶಾಲೆಯ ಶಿಕ್ಷಕ ನಾಗಶಟ್ಟಿ ಬಾಸಹಳ್ಳಿ (58) ಮೃತ ದುರ್ದೈವಿ. ಚಿಂಚೋಳಿ ತಾಲೂಕಿನ ಬುರಗಪಳ್ಳಿ ನಿವಾಸಿಯಾಗಿರುವ ನಾಗಶಟ್ಟಿ ಸಮೀಕ್ಷೆಗೆ ತೆರಳಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.