ಕಲಬುರಗಿ: ಹಗಲ ಹೊತ್ತಲ್ಲಿ ಶಿಕ್ಷಕ ವೃತ್ತಿ ಮಾಡುತ್ತಿದ್ದ ವ್ಯಕ್ತಿ, ರಾತ್ರ್ಯಾಗುತ್ತಿದ್ದಂತೆ ಮನೆಗಳ್ಳನ ಮಾಡಿ ಚಿನ್ನಾಅಭರಣ ಕಳುವು ಮಾಡುತ್ತಿದ್ದ ಖತರ್ನಾಕ್ ಆರೋಪಿಯನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿಯ ಬಿಲಾಲ್ ಕಾಲೋನಿ ನಿವಾಸಿ ಮೊಹಮ್ಮದ್ ಆರಿಫ್ ಬಂಧಿತ ಶಿಕ್ಷಕ. ಹಗಲು ಹೊತ್ತಲ್ಲಿ ಮದರಸಾದಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಮೊಹಮ್ಮದ್ ಆರಿಫ್ ರಾತ್ರಿ ಹೊತ್ತಿನಲ್ಲಿ ಮನೆಗಳ್ಳತನ ಮಾಡುತ್ತಿದ್ದ. ಕಲಬುರಗಿಯ ಹಲವೆಡೆಗಳಲ್ಲಿ ಕಳ್ಳತನ ಮಾಡುತ್ತಿದ್ದ. ಈ ಬಗ್ಗೆ ದೂರು ದಾಖಲಾಗಿತ್ತು.
ಸದ್ಯ ಕಳ್ಳ ಶಿಕ್ಷಕನನ್ನು ಬಂಧಿಸಿರುವ ಪೊಲೀಸರು 13 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ.
