ಕಲಬುರಗಿ: ಅಪರಿಚಿತವಾಹನ ಬೈಕ್ ಗೆ ಡಿಕ್ಕಿಯಾಗಿ ಕೆ.ಎಸ್.ಆರ್.ಪಿ ಕಾನ್ಸ್ ಟೇಬಲ್ ಸಾವನ್ನಪ್ಪಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬೂರ್ (ಬಿ) ಗ್ರಾಮದಲ್ಲಿ ನಡೆದಿದೆ.
ಧೆರಪ್ಪ ಅಂಜುಟಗಿ (26) ಮೃತ ಕಾನ್ಸ್ ಟೇಬಲ್.ಕಲಬುರಗಿಯಿಂದ ಶಿವವಾಳ ಗ್ರಾಮಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಡಿವೈ ಎಸ್ ಪಿ ತಮ್ಮತಾಯ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೇವಲ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

