HomeKarnatakaBREAKING: ಬೈಕ್, ಕಾರ್, ಲಾರಿ ನಡುವೆ ಸರಣಿ ಅಪಘಾತ: ಮೂವರು ಸ್ಥಳದಲ್ಲೇ ಸಾವು

BREAKING: ಬೈಕ್, ಕಾರ್, ಲಾರಿ ನಡುವೆ ಸರಣಿ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಜೇವರ್ಗಿಯ ಹಸನಾಪುರ ಬಳಿ ನಡೆದ ಸರಣಿ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೈಕ್, ಕಾರ್ ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಬೈಕ್ ಮತ್ತು ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಘವೇಂದ್ರ(35), ಮುಜಾಹಿದ್(30), ಹುಸೇನ್(45) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ನಲ್ಲಿದ್ದ ಪರಮಾನಂದ ಹಾಗೂ ಕಾರ್ ನಲ್ಲಿದ್ದ ಮೂವರಿಗೆ ಗಂಭೀರವಾದ ಗಾಯಗಳಾಗಿವೆ. ಸ್ಥಳಕ್ಕೆ ಪೊಲೀಸ್ ಆಯುಕ್ತ ಡಾ. ಶರಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲಬುರಗಿ ಸಂಚಾರ ಠಾಣೆ -1ರ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಪೊಲೀಸರು ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular