ಕಲಬುರಗಿ: ಕಲಬುರಗಿ ನಗರದಲ್ಲಿರುವ ಬಾರ್ ಆಂಡ್ ರೆಸ್ಟೋರೆಂಟ್ ವೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡ ಧಗ ಧಗನೆ ಹೊತ್ತಿ ಉರಿದಿದೆ.
ಬಾರ್ ಆಂಡ್ ರೆಸ್ಟೋರೆಂಟ್ ನ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. ಬೆಂಕಿಯಿಂದಗಿ ಮುಗಿಲೆತ್ತರದವರೆಗೆ ದಟ್ಟ ಹೊಗೆ ಆವರಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಅಕ್ಕಪಕ್ಕದ ಕಟ್ಟಡಗಳಿಗೆ ಬೆಂಕಿ ವ್ಯಾಪಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

