ಕಲಬುರಗಿ: ತಹಶಿಲ್ದಾರ್ ಕಚೇರಿಯ ಎಫ್ ಡಿಎ ಓರ್ವರು ಲಂಚದ ಹಣದ ಸಮೇತ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಜಿಲ್ಲೆಯ ಕಮಲಾಪುರ ತಹಶಿಲ್ದಾರ್ ಕಚೇರಿಯ ಎಫ್ ಡಿಎ ಶಶಿಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದವರು. ಜಮೀನು ದಾಖಲೆ ನೀಡುವುದಕ್ಕೆ ಎಫ್ ಡಿಎ ಶಶಿಕುಮಾರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕಿಶನ್ ರಾಠೋಡ್ ಎಂಬುವವರ ಬಳಿ ಲಂಚದ ಹಣ ಕೇಳಿದ್ದರು.
10 ಸಾವಿರ ರೂಪಾಯಿ ಲಂಚದ ಹಣ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಎಫ್ ಡಿಎ ಶಶಿಕುಮಾರ್ ನನ್ನು ಬಂಧಿಸಿದ್ದಾರೆ. ಲೋಕಾಯುಕ್ತ ಇನ್ಸ್ ಪೆಕ್ಟರ್ ಅರುಣ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದೆ.

