ಕಲಬುರಗಿ: ಒಂದೂವರೆ ವರ್ಷದ ಮಗುವಿನ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣಾಅಗಿರುವ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ ಗ್ರಾಮದಲ್ಲಿ ನಡೆದಿದೆ.
25 ವರ್ಷದ ಅಂಬಿಕಾ ಹಾಗೂ ಒಂದೂವರೆ ವರ್ಷದ ಆರಾಧ್ಯ ಮೃತ ದುರ್ದೈವಿಗಳು. ಕೌಟುಂಬಿಕ ಕಲಹದಿಂದ ಮನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇಂದು ಬೆಳಿಗ್ಗೆ ಮನೆಯಿಂದ ಅಂಬಿಕಾ ತನ್ನ ಮಗುವಿನೊಂದಿಗೆ ಬಾವಿ ಬಳಿ ಹೋಗಿದ್ದಳು. ಹೀಗೆ ಹೋದವರೇ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಾವಿಯಲ್ಲಿ ತಾಯಿ ಹಾಅಗೂ ಮಗುವಿನ ಮೃತದೇಹ ತೇಲುತ್ತಿರುವುದನ್ನು ಕಂಡು ಸ್ಥಳೀಯರು ಕುಟುಂಬಕ್ಕೆ ಸುದ್ದಿ ತಲುಪಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

