ಕಲಬುರಗಿ: ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿರುವ ಘಟನೆ ಬೆನ್ನಲ್ಲೇ ಇತ್ತ ಕಲಬುರಗಿ ಜಿಲ್ಲೆಯಲ್ಲಿಯೂ ಶಿವಾಅಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ.
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಡಿಜೆ ಸೌಂಡ್ ವಿಚಾರಕ್ಕೆ ಎರಡು ಸಮುದಾಯಗಳ ನಡುವೆ ಗಲಾಟೆಯಾಗಿದ್ದು, ಈ ವೇಳೆ ಕಲ್ಲು ತೂರಾಟ ನಡೆದಿದೆ. ಈ ಕುರಿತ ವಿಡಿಯೋ ಸಾಮಜೈಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ಮೆರವಣಿಗೆ ವೇಳೆ ಡಿಜೆ ಸೌಂಡ್ ವಿಚಾರಕ್ಕೆ ಎರಡು ಕೋಮುಗಳ ನಡುವೆ ಸಂಘರ್ಷ ನಡೆದಿದ್ದು, ಈ ವೇಳೆ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ. ಗಣೇಶ ಕಟ್ಟೆ ಬಳಿ ಮೆರವಣಿಗೆಯಲ್ಲಿ ಬನಾಯೇಂಗೆ ಮಂದಿರ್ ಹಾಡಿಗೆ ಹಿಂದೂ ಕಾರ್ಯಕರ್ತರು ಭರ್ಜರಿ ಸ್ಟೆಪ್ ಹಾಕಿದ್ದಾರೆ. ಈ ವೇಲೆ ಅಲ್ಲಿಗೆ ಬಂದ ಮುಸ್ಲಿಂ ಯುವಕತು ಕಿರಿಕ್ ಮಾಡೊದ್ದಾರೆ. ಸೌಂಡ್ ಕಡಿಮೆ ಮಾಡುವಂತೆ ಹೇಳಿದ್ದಾರೆ. ಈ ವೇಳೆ ಎರಡು ಕೋಮಿನ ನಡುವೆ ಗಲಾಟೆಯಾಗಿದೆ. ಕಟ್ಟಿಗೆ, ಕಲ್ಲಿನಿಂದ ಹೊಡೆದಾಡಿದ್ದಾರೆ. ಸದ್ಯ ಗ್ರಾಮದಲ್ಲಿ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ.
ಮೆರವಣಿಗೆ ವೇಳೆ ಮಕ್ಕಳು ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ಮನೆಯ ಮಾಳಿಗೆ ಮೇಲೆ ಬಾಲಕನೊಬ್ಬ ಕೈಯಲ್ಲಿ ಕಲ್ಲು ಹಿಡಿದು ನಿಂತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

