ಕಲಬುರಗಿ: ಬೆಳಗಿನ ಉಪಹಾರ ಸೇವಿಸಿದ್ದ 20ಕ್ಕೂ ಹೆಚ್ಚು ವಸತಿ ಶಾಲೆ ಮಕ್ಕಳು ತೀವ್ರ ಅಸ್ವಸ್ಥರಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.
ಅಸ್ವಸ್ಥಗೊಂಡಿರುವ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲ ಮಕ್ಕಳನ್ನು ಅಫಜಲಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ವಸ್ಥಗೊಂಡಿರುವ ಮಕ್ಕಳಲ್ಲಿ ಫುಡ್ ಪಾಯಿಸನ್ ಆಗಿರುವ ಅನುಮಾನ ವ್ಯಕ್ತವಾಗಿದೆ.
ಆಸ್ಪತ್ರೆಗೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮತ್ತೊಂದೆಡೆ ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

