HomeKarnatakaBREAKING: ಕಲಬುರಗಿ ಜಿಲ್ಲೆಯ 4 ತಾಲೂಕುಗಳಲ್ಲಿ ಗರಿಷ್ಠ ತಾಪಮಾನ ದಾಖಲು: ಆರೇಂಜ್ ಅಲರ್ಟ್ ಘೋಷಣೆ

BREAKING: ಕಲಬುರಗಿ ಜಿಲ್ಲೆಯ 4 ತಾಲೂಕುಗಳಲ್ಲಿ ಗರಿಷ್ಠ ತಾಪಮಾನ ದಾಖಲು: ಆರೇಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈ ನಡುವೆ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ತಾಪಮಾನ ದಾಖಲಾಗಿದ್ದು, ಜನರು ಹೈರಾಣಾಗಿದ್ದಾರೆ.

ಅದರಲ್ಲಿಯೂ ಕಲಬುರಗಿ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ಔರಾದ್, ಚಿಂಚೋಳಿ, ಅಫಜಲಪುರ ಹಾಗೂ ಆಳಂದ ತಾಲೂಕುಗಳಲ್ಲಿ ದಾಖಲೆಯ ಗರಿಷ್ಠ ಮಟ್ಟದಲ್ಲಿ ತಾಪಮಾನ ಏರಿಕೆಯಾಗಿದೆ.

ಔರಾದ್ ತಾಲೂಕಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಲ್ ಉಷ್ಣಾಂಶ ದಾಖಲಾಗಿದೆ. ಚಿಂಚೋಳಿ ಹಾಗೂ ಅಫಜಲಪುರದಲ್ಲಿ ತಲಾ 44.03 ಡಿಗ್ರಿ ಸೆಲ್ಸಿಯಲ್ ತಾಪಮಾನ ದಾಖಲಾಗಿದೆ. ಅಳಂದದಲ್ಲಿ 44.01 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಅತ್ಯಧಿಕ ತಾಪಮಾನ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಆರೇಂಜ್ ಅಲರ್ಟ್ ಘೋಷಣೆ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲೆಯಲ್ಲಿ ಬಿಸಿಲ ತೀವ್ರತೆ ಹಾಗೂ ಉಷ್ಣ ಅಲೆ ಹಿನ್ನೆಲ್ರೆಯಲ್ಲಿ ಸ್ಜನರು ಮುಂಜಾಗೃತಾ ಕ್ರಮವಾಗಿ ಮಧ್ಯಾಹ್ನ 12 ಗಂಟೆಯಿಂದ ಸಂಜೆಯವರೆಗೆ ಅನಾವಶ್ಯಕವಾಗಿ ಮನೆ ಹಾಗೂ ಕಚೇರಿಗಳಿಂದ ಹೊರ ಹೋಗದಂತೆ ಸೂಚನೆ ನೀಡಲಾಗಿದೆ.

ಬಿಸಿಲ ಧಗೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಸಾಕಷ್ಟು ನೀರು ಸೇವಿಸುವಂತೆ. ನೆರಳಿನಲ್ಲಿ ಇರುವಂತೆ ಹಾಗೂ ಮುನ್ನೆ಼ಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular