ಕಲಬುರಗಿ: ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿಇನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಕಲಬುರಗಿ ಜಿಲ್ಲೆಯಲ್ಲಿಯೂ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ನಡೆದಿದೆ.
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಬೀರನಳ್ಳಿ ಗ್ರಾಮದ ಬಳಿಯ ಕಾಗಿಣಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನಾಪತ್ತೆಯಾಗಿದ್ದಾರೆ. ಐವರು ಸ್ನೇಹಿತರ ಗುಂಪು ಕಾಗಿಣಾ ನದಿಗೆ ಹೋಗಿದ್ದರು. ಈ ವೇಳೆ ಮೂವರು ತಮಗೆ ಈಜಲು ಬರುವುದಿಲ್ಲ ಎಂದು ದಡದಲ್ಲಿಯೇ ನಿಂತಿದ್ದರು. ಉಳಿದ ಇಬ್ಬರು ಯುವಕರು ನದಿಗೆ ಇಳಿದಿದ್ದಾರೆ.
ಈಜಾಡುತ್ತಿದ್ದ ವೇಳೆ ನೀರಿನ ಸುಳಿಗೆ ಸಿಲುಕಿ ನೀರಿನಲ್ಲಿ ಮುಳುಗಿದ್ದಾರೆ. ಇಬ್ಬರೂ ಸ್ನೇಹಿತರು ನೀರುಪಾಲಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಯುವಕರಿಗಾಗಿ ನದಿಯಲ್ಲು ಶೋಧಕಾರ್ಯ ನಡೆಸಲಾಗಿದೆ.
ಮಳಖೇಡ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

