BREAKING NEWS: ಕಲಬುರ್ಗಿಯಲ್ಲಿ 8 ವರ್ಷದ ಬಾಲಕಿಗೆ ಕೊರೊನಾ ಸೋಂಕು

ಕಲಬುರ್ಗಿ: ರಾಜ್ಯದಲ್ಲಿಯೂ ಕೊರೊನಾ ಸೋಂಕು ಹಾಗೂ JN.1 ಉಪತಳಿ ವ್ಯಾಪಕವಾಗಿ ಹರಡುತ್ತಿದ್ದು, ಕಲಬುರ್ಗಿಯಲ್ಲಿ ಒಂದುವರೆ ವರ್ಷದ ಬಳಿಕ ಕೊರೊನಾ ಸೋಂಕು ಪತ್ತೆಯಾಗಿದೆ.

ಮುಂಬೈಯಿಂದ ಕಲಬುರ್ಗಿಗೆ ಆಗಮಿಸಿದ್ದ ಬಾಲಕಿಯಲ್ಲಿ ಸೋಂಕು ದೃಢಪಟ್ಟಿದೆ. ಕ್ಷಯರೋಗ ಚಿಕಿತ್ಸೆ ಪಡೆಯಲು ಡಿ.23ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ 8 ವರ್ಷದ ಬಾಲಕಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಬಾಲಕಿಗೆ ಪ್ರತ್ಯೇಕವಾಗಿ ಐಸೋಲೇಷನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಬಾಲಕಿ ಸಂಪರ್ಕದಲ್ಲಿದ್ದವರನ್ನು ಐಸೋಲೇಷನ್ ಗೆ ಸೂಚನೆ ನೀಡಲಾಗಿದೆ ಎಂದು ಕಲಬುರ್ಗಿ ಡಿಹೆಚ್ ಒ ಡಾ.ರಾಜಶೇಖರ್ ಮಾಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read