HomeKarnatakaBIG NEWS: ಸಿಲಿಂಡರ್ ಸ್ಫೋಟ; ತಾಯಿ ಹಾಗೂ ಮೂವರು ಮಕ್ಕಳಿಗೆ ಗಂಭೀರ ಗಾಯ

BIG NEWS: ಸಿಲಿಂಡರ್ ಸ್ಫೋಟ; ತಾಯಿ ಹಾಗೂ ಮೂವರು ಮಕ್ಕಳಿಗೆ ಗಂಭೀರ ಗಾಯ

ಕಲಬುರ್ಗಿ: ಸಿಲಿಂಡರ್ ಸ್ಫೋಟಗೊಂಡು ತಾಯಿ ಹಾಗೂ ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಇಟವಾ ಗ್ರಾಮದಲ್ಲಿ ನಡೆದಿದೆ.

ತಾಯಿ ಅಂಜನಾ ಹಾಗೂ ಮಕ್ಕಳಾದ ಕಾರ್ತಿಕ್, ಖುಷಿ ಹಾಗೂ ಕೀರ್ತನಾ ಗಾಯಾಳುಗಳು. ಗಾಯಾಳುಗಳನ್ನು ಕಲಬುರ್ಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಕೀರ್ತನಾಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ ಆಸ್ಪತ್ರೆಗೆ ಧಾವಿಸಿ ಗಾಯಾಳುಗಳ ಆರೋಗ್ಯ ಸ್ಥಿತಿ ವಿಚಾರಿಸಿದ್ದು, ಗಾಯಾಳುಗಳ ಸಂಪೂರ್ಣ ವೆಚ್ಚ ಭರಿಸುವುದಾಗಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular