HomeKarnatakaBREAKING NEWS: ಅಗರಬತ್ತಿ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ; ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಕಾರ್ಖಾನೆ

BREAKING NEWS: ಅಗರಬತ್ತಿ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ; ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಕಾರ್ಖಾನೆ

ಕಲಬುರ್ಗಿ: ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಡೀ ಫ್ಯಾಕ್ಟರಿ ಹೊತ್ತಿ ಉರಿದ ಘಟನೆ ಕಲಬುರ್ಗಿ ನಗರದ ಕೈಲಾಸ ನಗರದಲ್ಲಿ ನಡೆದಿದೆ.

ಅಮವಾಸ್ಯೆ ಹಿನ್ನೆಲೆಯಲ್ಲಿ ಇಂದು ಫ್ಯಾಕ್ಟರಿ ಬಂದ್ ಮಾಡಲಾಗಿತ್ತು. ಆದರೆ ಮಧ್ಯಾಹ್ನ 2:30ರ ಸುಮಾರಿಗೆ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಹೊತ್ತಲ್ಲಿ ಫ್ಯಾಕ್ಟರಿ ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದಿದೆ.

ಚಂದ್ರಶೇಖರ್ ಸರಸಂಬಿ ಎಂಬುವವರಿಗೆ ಸೇರಿದ ಫ್ಯಾಕ್ಟರಿ ಇದಾಗಿದ್ದು, ಲಕ್ಷಾಂತರ ಮೌಲ್ಯದ ಅಗರಬತ್ತಿ ಸುಟ್ಟು ಭಸ್ಮವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಆರ್.ಜೆ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular