HomeKarnatakaBIG NEWS: ಮತ್ತೊಂದು ಪರೀಕ್ಷಾ ಅಕ್ರಮ; ಅಂಚೆ ಇಲಾಖೆ ನೇಮಕಾತಿ ವೇಳೆ ನಕಲಿ ಅಂಕಪಟ್ಟಿ ನೀಡಿ...

BIG NEWS: ಮತ್ತೊಂದು ಪರೀಕ್ಷಾ ಅಕ್ರಮ; ಅಂಚೆ ಇಲಾಖೆ ನೇಮಕಾತಿ ವೇಳೆ ನಕಲಿ ಅಂಕಪಟ್ಟಿ ನೀಡಿ ಸಿಕ್ಕಿಬಿದ್ದ 8 ಅಭ್ಯರ್ಥಿಗಳು

ಕಲಬುರ್ಗಿ: ಅಂಚೆ ಇಲಾಖೆಯ 1714 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಉದ್ಯೋಗ ಪಡೆಯಲು ನಕಲಿ ಅಂಕಪಟ್ಟಿ ನೀಡಿ ಅಭ್ಯರ್ಥಿಗಳು ಸಿಕ್ಕಿಬಿದ್ದ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.

ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ನಕಲಿ ಅಂಕಪಟ್ಟಿಯನ್ನು ನೀಡಿದ್ದಾರೆ. ಪರಿಶೀಲನೆ ವೇಳೆ 8 ಅಭ್ಯರ್ಥಿಗಳು ಸಿಕ್ಕಿ ಬಿದ್ದಿದ್ದಾರೆ. ನಕಲಿ ಅಂಕಪಟ್ಟಿ ನೀಡಿದ್ದ ಅಭ್ಯರ್ಥಿಗಳ ವಿರುದ್ಧ ಅಂಚೆ ಇಲಾಖೆ ವಂಚನೆ ದೂರು ದಾಖಲಿಸಿದೆ.

ಈ ಹಿಂದೆ ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮ, ಕೆಇಎ ಪರೀಕ್ಷಾ ಅಕ್ರಮ ಪ್ರಕರಣದ ಬಳಿಕ ಇದೀಗ ಕಲಬುರ್ಗಿಯಲ್ಲಿ ಅಂಚೆ ಇಲಾಖೆ ನೇಮಕಾತಿ ವೇಳೆಯೂ ನಕಲಿ ಅಂಕಪಟ್ಟಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular