HomeKarnatakaBIG NEWS: ವರುಣಾರ್ಭಟ: ಸಿಡಿಲು ಬಡಿದು ಓರ್ವ ಮಹಿಳೆ, 11 ಮೇಕೆಗಳು ಸಾವು

BIG NEWS: ವರುಣಾರ್ಭಟ: ಸಿಡಿಲು ಬಡಿದು ಓರ್ವ ಮಹಿಳೆ, 11 ಮೇಕೆಗಳು ಸಾವು

ಕಲಬುರ್ಗಿ: ಕಲಬುರ್ಗಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜನಜೀವನ ತತ್ತರಗೊಂಡಿದೆ. ಭಾರಿ ಮಳೆ ಅವಾಂತರದ ನಡುವೆ ಸಿಡಿಲು ಬಡಿದು ಮಹಿಳೆಯೋರ್ವರು ಮೃತಪಟ್ಟಿದ್ದಾರೆ.

ಚಿತ್ತಾಪುರ ತಾಲೂಕಿನ ಸಿದನೂರು ಗ್ರಾಮದಲ್ಲಿ ಸಿಡಿಲು ಬಡಿದು ಮಹಿಳೆ ಮೃತಪಟ್ಟಿದ್ದು, ಇನ್ನೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲಾವತಿ (35) ಮೃತ ಮಹಿಳೆ. ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಚಿತ್ತಾಪುರ ತಾಲೂಕಿನ ರಾಜೋಳ ಗ್ರಾಮದಲ್ಲಿ ಸಿಡಿಲಬ್ಬರಕ್ಕೆ 11 ಮೇಕೆಗಳು ಸಾವನ್ನಪ್ಪಿವೆ. ಭಾರಿ ಮಳೆಯಿಂದಾಗಿ ಮೇಕೆಗಳು ಮರದ ಕೆಳಗೆ ಆಶ್ರಯ ಪಡೆದಿದ್ದವು. ಈ ವೇಳೆ ಏಕಾಏಕಿ ಸಿಡಿಲು ಬಡಿದಿದ್ದು, 11 ಮೇಕೆಗಳು ಸಾವನ್ನಪ್ಪಿವೆ. ಶಿವಪ್ಪ ಪೂಜಾರಿ ಎಂಬುವವರಿಗೆ ಸೇರಿದ ಮೇಕೆಗಳಾಗಿದ್ದವು. ಸ್ಥಳಕ್ಕೆ ಪಶು ಸಂಗೋಪನಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular