BIG NEWS: ಕಾಂಗ್ರೆಸ್ ಮುಖಂಡ, ಮಾಜಿ ಮೇಯರ್ ವಿರುದ್ಧ ಮಹಿಳಾ ಅಧಿಕಾರಿಯಿಂದ ಕಿರುಕುಳ ಆರೋಪ

ಕಲಬುರ್ಗಿ: ಮಹಿಳಾ ಅಧಿಕಾರಿಯೊಬ್ಬರು ಕಾಂಗ್ರೆಸ್ ಮುಖಂಡ, ಮಾಜಿ ಮೇಯರ್ ಶರಣು ಮೋದಿ ವಿರುದ್ಧ ಕಿರುಕುಳ ಆರೋಪ ಮಾಡಿದ್ದಾರೆ.

ಕಲಬುರ್ಗಿ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಜಿಲ್ಲಾ ಅಂಕಿತ ಅಧಿಕಾರಿ ಡಾ.ಅರ್ಚನಾ ಕಮಲಾಪುರಕರ, ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮೇಯರ್ ಶರಣು ಮೋದಿ ವಿರುದ್ಧ ಕಿರುಕುಳ ಆರೋಪ ಮಾಡಿದ್ದು, ಈ ಕುರಿತ ಆಡಿಯೋ ಕೂಡ ಬಿಡುಗಡೆ ಮಾಡಿದ್ದಾರೆ.

ಕಲಬುರ್ಗಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಡಾ.ಅರ್ಚನಾ, ಈ ಹಿಂದೆ ನಾನು ಐಎಸ್ ಐ ಹಾಗೂ ಪರವಾನಗಿ ಪಡೆಯದ ನೀರಿನ ಘಟಕಗಳನ್ನು ಸೀಜ್ ಮಾಡಿದ್ದೆ. ಕಳೆದ ಮೂರು ದಿನಗಳಲ್ಲಿ ಮೂರು ಘಟಕಗಳ ಮೇಲೆ ದಾಳಿ ನಡೆಸಿ ಸೀಜ್ ಮಾಡಿದ್ದೆ. ನಿನ್ನೆ ಸಂಜೆ ಕಾಂಗ್ರೆಸ್ ಮುಖಂಡ ಶರಣು ಮೋದಿ ಕರೆ ಮಾಡಿ ಕಿರುಕುಳ ನೀಡಿದ್ದಾರೆ. ಯಾಕೆ ನೀರಿನ ಘಟಕ ಸೀಜ್ ಮಾಡಿದ್ದೀರಿ? ನಿಮ್ಮ ವೈಯಕ್ತಿಕ ಹಿತಾಸಕ್ತಿ ಏನು ಎಂದು ಪ್ರಶ್ನಿಸಿದ್ದಾರೆ.

ಮಹಿಳಾ ಅಧಿಕಾರಿಗೆ ಈ ರೀತಿ ಫೋನ್ ಮಾಡಿ ಕಿರುಕುಳ ನೀಡಿದರೆ ನಾವು ಕೆಲಸ ಹೇಗೆ ಮಾಡಬೇಕು? ಹೀಗಾಗಿ ನಮಗೆ ಸೂಕ್ತ ಭದ್ರತೆ ನೀಡಬೇಕು ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read