ತನ್ನ ಟೈಟಲ್ ಹಾಗೂ ಹಾಡಿನಿಂದಲೇ ಭರ್ಜರಿ ಸೌಂಡ್ ಮಾಡಿದ್ದ, ವಿಕ್ಕಿ ವರುಣ್ ನಟಿಸಿ ನಿರ್ದೇಶಿಸಿರುವ ‘ಕಾಲಾಪತ್ಥರ್’ ಚಿತ್ರ ಮುಂದಿನ ತಿಂಗಳು ಸೆಪ್ಟೆಂಬರ್ 13ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ಇಂದು ಚಿತ್ರತಂಡ ಬಿಡುಗಡೆ ದಿನಾಂಕವನ್ನು ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿದ್ದು, ಮನರಂಜನೆಯ ರಸದೌತಣ ಪಡೆದುಕೊಳ್ಳಲು ಸಿನಿ ಪ್ರೇಕ್ಷಕರು ಸಜ್ಜಾಗಿದ್ದಾರೆ.
ಈ ಚಿತ್ರದಲ್ಲಿ ವಿಕ್ಕಿ ವರುಣ್ ಹಾಗೂ ಧನ್ಯ ರಾಮ್ ಕುಮಾರ್ ಪ್ರಮುಖ ಪಾತ್ರದಲ್ಲಿದ್ದು, ನಾಗಾಭರಣ, ಅಚ್ಯುತ್ ಕುಮಾರ್, ಸಂಪತ್, ರಾಜೇಶ್ ನಟರಂಗ, ಗಲ್ಲಿ ನಟ, ಬಸು ಹಿರೇಮಠ, ಕಾಂತರಾಜ್ ಕಡ್ಡಿಪುಡಿ ಉಳಿದ ತಾರಂಗಣದಲ್ಲಿದ್ದಾರೆ.
ಭುವನ್ ಮೂವೀಸ್ ಬ್ಯಾನರ್ ನಲ್ಲಿ ಸುರೇಶ್ ಹಾಗೂ ನಾಗರಾಜ್ ನಿರ್ಮಾಣ ಮಾಡಿದ್ದಾರೆ. ಅನುಪ್ ಸೀಳಿನ್ ಸಂಗೀತ ಸಂಯೋಜನೆ ನೀಡಿದ್ದು, ದೀಪು ಎಸ್ ಕುಮಾರ್ ಸಂಕಲನ, ರಾಜೇಶ್ ಎನ್ ವೇಷ ಭೂಷಣ, ಸಂದೀಪ್ ಕುಮಾರ್ ಛಾಯಾಗ್ರಾಹಣ, ಹಾಗೂ ವಿಕ್ರಮ್ ಮೋರ್ ಮತ್ತು ಮಾಸ್ ಮಾದ ಸಾಹಸ ನಿರ್ದೇಶನವಿದೆ.