ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕಗಳು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ.
ಕಲಾಸಿಪಾಳ್ಯ ಬಸ್ ನಿಲ್ದಾಣದ ಶೌಚಾಲಯದ ಹೊರಭಾಗದಲ್ಲಿ ಬ್ಯಾಗ್ ವೊಂದರಲ್ಲಿ ಜಿಲೆಟಿನ್ ಕಡ್ಡಿಗಳು ಸೇರಿದಂತೆ ಸ್ಫೋಟಕಗಳು ಪತ್ತೆಯಾಗಿವೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಬಾಂಬ್ ಪತ್ತೆದಳ, ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಬಸ್ ನಿಲ್ದಾಣದ ಮೂಲೆ ಮೂಲೆಗಳನ್ನು ತಪಾಸಣೆ ನಡೆಸಿದೆ.
ಸ್ಥಳದಲ್ಲಿ ಸ್ಫೋಟಕಗಳನ್ನು ತಂದಿಟ್ಟವರು ಯಾರು ಎಂಬ ಬಗ್ಗೆ ಪೊಲೀಸರು ಶೋಧ ನಡೆಸಿದ್ದಾರೆ. ಶೌಚಾಲಯದ ಹೊರಭಾಗದಲ್ಲಿ ಪತ್ತೆಯಾಗಿರುವ ಬ್ಯಾಗ್ ನಲ್ಲಿ ಜಿಲೆಟಿನ್ ಕಡ್ಡಿಗಳು, ಡಿಟೋನೇಟರ್ ಗಳು ಪತ್ತೆಯಾಗಿವೆ. ಈ ಸಂಬಂಧ ಪೊಲೀಸರು ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.