HomeIndiaBIG NEWS: ಕಾಳಿಗಂಜ್ ಬಾಂಬ್ ಸ್ಫೋಟದಲ್ಲಿ ಬಾಲಕಿ ಸಾವು ಕೇಸ್: ಮತ್ತೆ ನಾಲ್ವರು ಆರೋಪಿಗಳು ಅರೆಸ್ಟ್

BIG NEWS: ಕಾಳಿಗಂಜ್ ಬಾಂಬ್ ಸ್ಫೋಟದಲ್ಲಿ ಬಾಲಕಿ ಸಾವು ಕೇಸ್: ಮತ್ತೆ ನಾಲ್ವರು ಆರೋಪಿಗಳು ಅರೆಸ್ಟ್

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕಾಳಿಗಂಜ್ ಬಳಿ ಬಾಂಬ್ ಸ್ಫೋಟಗೊಂಡು 13 ವರ್ಷದ ಬಾಲಕಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರಲ್ಲಿ ಇಬ್ಬರು ಪ್ರಮುಖ ಆರೋಪಿಗಳಾಗಿದ್ದಾರೆ. ನಾಲ್ವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕಾಳಿಗಂಜ್ ಪ್ರದೇಶದ ವಿಧಾನಸಭಾ ಉಪಚುನಾವಣೆ ಮತ ಎಣಿಕೆ ವೇಳೆ ಈ ಘಟನೆ ನಡೆದಿತ್ತು. ಫಲಿತಾಂಶ ಅಧಿಕೃತವಾಗಿ ಘೋಷಣೆಯಾಗುವ ಮೊದಲೇ ತೃಣಮೂಲ ಕಾಂಗ್ರೆಸ್ ವಿಜಯೋತ್ಸವ ರ್ಯಾಲಿ ನಡೆಸಿತ್ತು. ಈ ವೇಳೆ ಬಾಂಬ್ ಗಳನ್ನು ಎಸೆಯಲಾಗಿದ್ದು, 13 ವರ್ಷದ ಬಾಲಕಿ ಸಾವನ್ನಪ್ಪಿದ್ದಳು. ಪ್ರಕರಣ ಸಂಬಂಧ ಈವರೆಗೆ 10ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular