HomeKarnatakaಶಾಲೆಗಳಲ್ಲಿ ಪ್ರತಿಭಾ ಕಾರಂಜಿ, ಕಲೋತ್ಸವ: ಶಿಕ್ಷಣ ಇಲಾಖೆಯಿಂದ ವೇಳಾಪಟ್ಟಿ ಪ್ರಕಟ

ಶಾಲೆಗಳಲ್ಲಿ ಪ್ರತಿಭಾ ಕಾರಂಜಿ, ಕಲೋತ್ಸವ: ಶಿಕ್ಷಣ ಇಲಾಖೆಯಿಂದ ವೇಳಾಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2026 ಆಚರಣೆಗೆ ಶಾಲಾ ಶಿಕ್ಷಣ ಇಲಾಖೆಯಿಂದ ವೇಳಾಪಟ್ಟಿ ಪ್ರಕಟಿಸಲಾಗಿದೆ. ಸೆಪ್ಟೆಂಬರ್ ನಲ್ಲಿ ಶಾಲಾ ಮಟ್ಟದಿಂದ ಸ್ಪರ್ಧೆಗಳು ಆರಂಭವಾಗಲಿದ್ದು ಡಿಸೆಂಬರ್ ನಲ್ಲಿ ಮುಕ್ತಾಯವಾಗಲಿದೆ.

ಶಾಲಾ ಹಂತದ ಸ್ಪರ್ಧೆಗಳು ಸೆಪ್ಟೆಂಬರ್ 2ನೇ ವಾರದೊಳಗೆ, ಕ್ಲಸ್ಟರ್ ಹಂತದ ಸ್ಪರ್ಧೆಗಳು ಸೆಪ್ಟೆಂಬರ್ ನಾಲ್ಕನೇ ವಾರದೊಳಗೆ, ತಾಲೂಕು ಹಂತದ ಸ್ಪರ್ಧೆಗಳು ನವೆಂಬರ್ 2ನೇ ವಾರದೊಳಗೆ, ಜಿಲ್ಲಾ ಹಂತದ ಸ್ಪರ್ಧೆಗಳು ನವೆಂಬರ್ 4ನೇ ವಾರದೊಳಗೆ ಪೂರ್ಣಗೊಳ್ಳಬೇಕು. ಡಿಸೆಂಬರ್ 2006 ರ ಒಳಗೆ ರಾಜ್ಯ ಮಟ್ಟದ ಸ್ಪರ್ಧೆ ಮುಕ್ತಾಯವಾಗಬೇಕು ಎಂದು ತಿಳಿಸಲಾಗಿದೆ.

ಎಲ್ಲಾ ವಿಭಾಗಗಳಲ್ಲಿ ವಿದ್ಯಾರ್ಥಿಗಳು ವೈಯಕ್ತಿಕ ವಿಭಾಗದಲ್ಲಿ ಗರಿಷ್ಠ ಎರಡು ವಿಷಯಗಳಲ್ಲಿ ಹಾಗೂ ಸಾಮೂಹಿಕ ವಿಭಾಗದಲ್ಲಿ ಕೇವಲ ಒಂದು ವಿಷಯದಲ್ಲಿ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ. ಪ್ರತಿಭಾ ಕಾರಂಜಿ, ಕಲೋತ್ಸವಕ್ಕೆ ವಿದ್ಯಾರ್ಥಿಗಳಿಂದ ಯಾವುದೇ ರೀತಿಯ ಶುಲ್ಕ ವಸೂಲಿ ಮಾಡುವಂತಿಲ್ಲ ಎಂದು ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular