HomeKarnatakaಕಲ್ಯಾಣ ಕರ್ನಾಟಕ ವೃಂದದ ಗ್ರೂಪ್ ಸಿ ಹುದ್ದೆ ನೇಮಕಾತಿಗೆ ನಾಳೆಯಿಂದ ಪರೀಕ್ಷೆ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ...

ಕಲ್ಯಾಣ ಕರ್ನಾಟಕ ವೃಂದದ ಗ್ರೂಪ್ ಸಿ ಹುದ್ದೆ ನೇಮಕಾತಿಗೆ ನಾಳೆಯಿಂದ ಪರೀಕ್ಷೆ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ತೆರಿಗೆ ಇಲಾಖೆಯಲ್ಲಿನ ವಾಣಿಜ್ಯ ತೆರಿಗೆ ಪರಿವೀಕ್ಷಕರ ಕಲ್ಯಾಣ ಕರ್ನಾಟಕ ವೃಂದದ ಗ್ರೂಪ್-ಸಿ ಹುದ್ದೆಗಳ ನೇಮಕಾತಿ ಪರೀಕ್ಷೆಗಳು ಜನವರಿ 06 ಮತ್ತು 07 ರಂದು ನಡೆಯಲಿದೆ.

ಪರೀಕ್ಷೆಗಳನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸುವ ಉದ್ದೇಶದಿಂದ ಜನವರಿ 06 ರಂದು ಮಧ್ಯಾಹ್ನ 02 ಗಂಟೆಯಿಂದ ಸಂಜೆ 04 ಗಂಟೆಯವರೆಗೆ ಹಾಗೂ ಜನವರಿ 07 ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 04 ಗಂಟೆಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಅಂತರದ ಪ್ರದೇಶದಲ್ಲಿ ಸಿ.ಆರ್.ಪಿ.ಸಿ 1973 ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಆದೇಶದನ್ವಯ ಪರೀಕ್ಷಾ ಮೌಲ್ಯಮಾಪನ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ. ಮೊಬೈಲ್, ಪೇಜರ್, ಜರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಮೌಲ್ಯಮಾಪನ ಕೇಂದ್ರದ ಹಾಗೂ ನಿಯೋಜಿತ ಶಿಕ್ಷಕರನ್ನು ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಿದೆ. 200 ಮೀಟರ್ ಪರೀಕ್ಷಾ ಮೌಲ್ಯಮಾಪನ ಕೇಂದ್ರದ ಸುತ್ತಲೂ ಜನರು ಮಾರಕಾಸ್ತçಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular