ಇಂದು ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ, 371ಜೆ ದಶಮಾನೋತ್ಸವದಲ್ಲಿ ಹೆಲ್ತ್ ಎಟಿಎಂ ಯೋಜನೆಗೆ ಸಿಎಂ ಚಾಲನೆ

ಕಲಬುರಗಿ: ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಮತ್ತು ಸಂವಿಧಾನದ ಅನುಚ್ಛೇದ 371ಜೆ ತಿದ್ದುಪಡಿಗೊಂಡು ಅನುಷ್ಠಾನಗೊಂಡಿರುವ ದಶಮಾನೋತ್ಸವ ಕಾರ್ಯಕ್ರಮ ಇಂದು ನಡೆಯಲಿದೆ.

ಹೈದರಾಬಾದ್ ಸಂಸ್ಥಾನದಿಂದ ವಿಮೋಚನೆಗೊಂಡ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ ಸಂಭ್ರಮವನ್ನು ಇಂದು ಆಚರಿಸಲಾಗುವುದು. ಕಲಬುರಗಿಯ ಪೊಲೀಸ್ ಪೆರೇಡ್ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಮೃತ ಮಹೋತ್ಸವದಲ್ಲಿ ಭಾಗವಹಿಸಲು ಹೈದರಾಬಾದ್ ನಿಂದ ವಿಶೇಷ ವಿಮಾನದಲ್ಲಿ ಕಲಬುರಗಿಗೆ ಆಗಮಿಸಲಿದ್ದಾರೆ.

ಸರ್ದಾರ್ ವಲ್ಲಭಬಾಯ್ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಿದ್ದಾರೆ. ಪೊಲೀಸ್ ಪೆರೇಡ್ ಮೈದಾನದಲ್ಲಿ ಜಿಲ್ಲಾಡಳಿತ ಆಯೋಜಿಸಿದ ವಿಮೋಚನಾ ದಿನಾಚರಣೆಯ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಹೆಲ್ತ್ ಎಟಿಎಂ ಚಾಲನೆ ನೀಡಲಿದ್ದಾರೆ. ನಂತರ ಶಾಸಕ ಎಂ.ವೈ. ಪಾಟೀಲ್ ಪುತ್ರ ಡಾ. ಸಂಜಯ್ ಪಾಟೀಲ್ ನಿರ್ಮಿಸಿರುವ ಶಾಂತಾ ಆಸ್ಪತ್ರೆ ಉದ್ಘಾಟನೆ ನೆರವೇರಿಸಿ ಮಧ್ಯಾಹ್ನ ಕಲಬುರಗಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತೆರಳಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read