HomeKarnatakaಕಲ್ಯಾಣ ಕರ್ನಾಟಕ ಯುವಕರಿಗೆ ಗುಡ್ ನ್ಯೂಸ್: ಖಾಲಿ ಹುದ್ದೆಗಳ ಭರ್ತಿ ಚಾಲನೆ: ಸಿಎಂ ಭರವಸೆ

ಕಲ್ಯಾಣ ಕರ್ನಾಟಕ ಯುವಕರಿಗೆ ಗುಡ್ ನ್ಯೂಸ್: ಖಾಲಿ ಹುದ್ದೆಗಳ ಭರ್ತಿ ಚಾಲನೆ: ಸಿಎಂ ಭರವಸೆ

ಕಲಬುರಗಿ: 371 ಜೆ ಜಾರಿಯಿಂದ ಕಲ್ಯಾಣ ಕರ್ನಾಟಕ ಭಾಗದ ಸಹಸ್ರಾರು ವಿದ್ಯಾವಂತರು ಉತ್ತಮ ಹುದ್ದೆಗಳನ್ನು ಪಡೆಯಲು ಸಾಧ್ಯವಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಕಲಬುರಗಿಯಲ್ಲಿ ನಿರ್ಮಾಣಗೊಂಡಿರುವ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡದ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿ, ನಮ್ಮ ಸರ್ಕಾರ ಉತ್ತರ ಕರ್ನಾಟಕ ಸೇರಿದಂತೆ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ನೀಲನಕ್ಷೆ ಸಿದ್ದಪಡಿಸಿಕೊಂಡಿದ್ದೇವೆ. ಇದು ನಮ್ಮ ಸರ್ಕಾರದ ಬದ್ಧತೆ.  ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಇಲ್ಲಿನ ವಿಶ್ವ ವಿದ್ಯಾಲಯಗಳಲ್ಲಿ ನೂತನ ಹೊಸ ಕೋರ್ಸ್ ಗಳನ್ನು ಆರಂಭಿಸುವುದು ಮತ್ತು ಖಾಲಿ ಇರುವ ಹುದ್ದೆಗಳನ್ನು ತುಂಬುವ ಕೆಲಸವನ್ನೂ ಮಾಡಲಾಗುವುದು ಎಂದು ಹೇಳಿದ್ದಾರೆ.

ತೊಗರಿ ಬೆಳೆ ಪ್ಯಾಕೇಜ್ ಬಗ್ಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಅಜಯ್ ಸಿಂಗ್ ಮತ್ತು ಇಲ್ಲಿನ ಶಾಸಕರು, ಸಚಿವರು ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ವರದಿ ಕೇಳಿದ್ದೇನೆ. ವರದಿ ಬಂದ ಕೂಡಲೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಈಗಾಗಲೇ ಅನುಭವ ಮಂಟಪ ನಿರ್ಮಾಣ ಅರ್ಧ ಮುಗಿದಿದೆ. ಪೂರ್ಣಗೊಳಿಸಲು ಅಗತ್ಯ ಹಣ ನೀಡಲಾಗಿದೆ. ಇನ್ನೂ ಅಗತ್ಯಬಿದ್ದರೆ ಹಣ ನೀಡಲಾಗುವುದು. ಹಣಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular