ಸಂಪುಟದಲ್ಲಿ ಕಲ್ಯಾಣ ಕರ್ನಾಟಕಕ್ಕೆ ಬಂಪರ್: ಇನ್ನೂ ನಾಲ್ವರಿಗೆ ಸಚಿವ ಸ್ಥಾನ…?

ನವದೆಹಲಿ: ಸಚಿವ ಸ್ಥಾನಕ್ಕೆ ಕಾಂಗ್ರೆಸ್ ಶಾಸಕರ ಕಸರತ್ತು ಮುಂದುವರೆದಿದ್ದು, ದೆಹಲಿಯಲ್ಲಿ ಆಕಾಂಕ್ಷಿಗಳು ಭಾರಿ ಲಾಬಿ ನಡೆಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗಕ್ಕೆ ಇನ್ನು ನಾಲ್ಕು ಸಚಿವ ಸ್ಥಾನಗಳು ಸಿಗುವ ಸಾಧ್ಯತೆ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಸ್ಥಾನಾಕಾಂಕ್ಷಿಗಳು ಭೇಟಿಯಾಗತೊಡಗಿದ್ದಾರೆ. ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್, ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಹಲವು ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆದ್ದಿದೆ. 41 ಕ್ಷೇತ್ರಗಳ ಪೈಕಿ 26 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್ ಖರ್ಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಉಳಿದ ಕಾಂಗ್ರೆಸ್ ಶಾಸಕರು ಮಂತ್ರಿ ಸ್ಥಾನಕ್ಕಾಗಿ ಕಸರತ್ತು ನಡೆಸಿದ್ದಾರೆ. ದೆಹಲಿಯಲ್ಲಿ ಅಧ್ಯಕ್ಷರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕಾಗಿ ಮನವಿ ಮಾಡಿದ್ದಾರೆ. ಈ ಬಾರಿ ಕಲ್ಯಾಣ ಕರ್ನಾಟಕಕ್ಕೆ ಹೆಚ್ಚಿನ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read