HomeKarnatakaಕಲ್ಯಾಣ ಕರ್ನಾಟಕದಲ್ಲಿ ಶಾಲೆ, ಸರ್ಕಾರಿ ಕಚೇರಿಗಳ ವೇಳಾಪಟ್ಟಿ ಬದಲು

ಕಲ್ಯಾಣ ಕರ್ನಾಟಕದಲ್ಲಿ ಶಾಲೆ, ಸರ್ಕಾರಿ ಕಚೇರಿಗಳ ವೇಳಾಪಟ್ಟಿ ಬದಲು

ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಯಾದ ರಾಯಚೂರಿನಲ್ಲಿ ಸರ್ಕಾರಿ ಶಾಲೆ, ಕಾಲೇಜು, ಕಚೇರಿಗಳ ಸಮಯ ಬದಲಾವಣೆ ಮಾಡುವ ಕುರಿತು ಪ್ರಾದೇಶಿಕ ಆಯುಕ್ತರು, ಕಲಬುರಗಿ ವಿಭಾಗ ಇವರಿಗೆ ಪತ್ರವನ್ನು ಬರೆಯಲಾಗಿದೆ.

ರಾಯಚೂರು ಜಿಲ್ಲಾಧಿಕಾರಿಗಳು ಪತ್ರವನ್ನು ಬರೆದಿದ್ದು ಈ ಪತ್ರ ಕಲ್ಯಾಣ ಕರ್ನಾಟಕ ವಿಭಾಗದ ರಾಯಚೂರು ಜಿಲ್ಲೆಯಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಕಛೇರಿ/ ಶಾಲಾ ಕಾಲೇಜಗಳ ಕರ್ತವ್ಯದ ಅವಧಿಯನ್ನು ಬದಲಾವಣೆ ಮಾಡುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.

ಜಿಲ್ಲಾಧ್ಯಕ್ಷರು ಹಾಗೂ ವಿಭಾಗೀಯ ಉಪಾಧ್ಯಕ್ಷರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಇವರ ಮನವಿ ಪತ್ರ ದಿನಾಂಕ 06.03.2026 ಉಲ್ಲೇಖಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪತ್ರದ ವಿವರಗಳು: ಈ ವಿಷಯಕ್ಕೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕ ವಿಭಾಗದ ರಾಯಚೂರು, ಜಿಲ್ಲೆಯಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಸುಮಾರು 47 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರುವುದರಿಂದ ಹಾಗೂ ಪ್ರತಿ ವರ್ಷದ ವಾಡಿಕೆಗಿಂತ ಈ ವರ್ಷ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಿನ ಉಷ್ಮಾಂಶ ದಾಖಲಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಬಿಸಿಲಿನ ಜಳಕ್ಕೆ ಕಛೇರಿಗೆ ಹೋಗಿ ಕಾರ್ಯನಿರ್ವಹಿಸಲು ನೌಕರರಿಗೆ ತೊಂದರೆಯಾಗುತ್ತದೆ ಹಾಗೂ ಹಲವಾರು ನೌಕರರು ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ಅವರಿಗೆ ಕಷ್ಟವಾಗುತ್ತದೆ.

ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಹಲವಾರು ಇಲಾಖೆಗಳ ಚುನಾಯಿತ ನಿರ್ದೇಶಕರು, ವಿನಂತಿಸಿಕೊಂಡಿರುವ ಕಾರಣ ನೌಕರರ ಹಿತದೃಷ್ಟಿಯಿಂದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕಛೇರಿ ಕೆಲಸದ ವೇಳೆಯನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1.30ರ ವರೆಗೆ ಬದಲಾವಣೆ ಮಾಡಿ ನೌಕರರಿಗೆ ಅನುಕೂಲ ಮಾಡಿಕೊಡಬೇಕೆಂದು ಕೋರಿರುತ್ತಾರೆ.

ಭಾರತೀಯ ಹವಮಾನ ಇಲಾಖೆ ಪ್ರಕಾರ 2026ರ ಬೇಸಿಗೆ ಸಮಯದಲ್ಲಿ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ಹಾಗೂ ಬಿಸಿ ಗಾಳಿಯ ವಾತಾವರಣದ ದಿನಗಳು ಹೆಚ್ಚಾಗಿ ಕಾಣಬರುವ ಸಾಧ್ಯತೆ ಇರುತ್ತದೆಯೆಂದು ತಿಳಿಸಿರುತ್ತಾರೆ.

ಸದರಿ ಅತಿ ಹೆಚ್ಚು ತಾಪಮಾನದಿಂದ ಸಾಮಾನ್ಯವಾಗಿ ನಿರ್ಜಲೀಕರಣ, ಶಾಖ ಸೆಳೆತ, ಶಾಖದ ಬಳಲಿಕೆ ಅಥವಾ ಶಾಖದ ಅಘಾತದಂತಹ (sun stroke) ಆರೋಗ್ಯದ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆ ಇರುತ್ತದೆ.

ಆದ್ದರಿಂದ ರಾಯಚೂರು ಜಿಲ್ಲೆಯ ಸಾರ್ವಜನಿಕರ, ಸರಕಾರಿ ಕಛೇರಿಯ ಸಿಬ್ಬಂದಿಯವರ, ಹಾಗೂ ವಿಧ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಕರ್ತವ್ಯದ ವೇಳೆಯನ್ನು ಏಪ್ರಿಲ್, ಮೇ ತಿಂಗಳಲ್ಲಿ ಕಛೇರಿಯ ಕರ್ತವ್ಯದ ಸಮಯವನ್ನು ಬೆಳಗೆ 8 ಗಂಟೆಯಿಂದ ಮಧ್ಯಾಹ್ನ 1.30ರ ವರೆಗೆ ಬದಲಾವಣೆ ಮಾಡುವುದು ಅವಶ್ಯವಿರುವುದರಿಂದ ಮಾನ್ಯರ ಆಲೋಚನೆ/ ಮುಂದಿನ ಕ್ರಮಕ್ಕಾಗಿ ಈ ವಿಷಯವನ್ನು ಸಲ್ಲಿಸಲಾಗುತ್ತಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular