BIG NEWS: ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮ: ಧ್ವಜಾರೋಹಣಕ್ಕೆ ತೆರಳುತ್ತಿದ್ದ ಪಿಡಿಒ ಭೀಕರ ಅಪಘಾತದಲ್ಲಿ ಸಾವು

ಕೊಪ್ಪಳ: ಕಲ್ಯಾಣ ಕರ್ನಾಟಕ ಉತ್ಸವ ಹಿನ್ನೆಲೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಪಿಡಿಒ ಓರ್ವರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕಕನೂರು ಬಳಿಯ ಇಟಗಿ ಗ್ರಾಮದಲ್ಲಿ ನಡೆದಿದೆ.

ಯರೇಹಂಚಿನಾಳ ಗ್ರಾಮದ ಪಿಡಿಒ ಅಡಿವೆಪ್ಪ ಯಡಿಯಾಪುರ (32) ಮೃತ ದುರ್ದೈವಿ. ಕಲ್ಯಾಣ ಕರ್ನಾಟಕ ಉತ್ಸವ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ದ್ವಜಾರೋಹಣದ ನಿಮಿತ್ತ ಬೆಳಿಗ್ಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಹಾಲಿನ ವಾಹನ ಬೈಕ್ ಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಡಿವೆಪ್ಪ ಅವರನ್ನು ಕಕನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಅಡಿವೆಪ್ಪ ಬೆಣಕಲ್ ಗ್ರಾಮದವರಾಗಿದ್ದು, ವರ್ಷದ ಹಿಂದಷ್ಟೇ ವಿವಾಹವಾಗಿದ್ದರು ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read