HomeJobsಉದ್ಯೋಗಾವಕಾಶ: ಸೆ.10 ರಂದು ನೇರ ಸಂದರ್ಶನ

ಉದ್ಯೋಗಾವಕಾಶ: ಸೆ.10 ರಂದು ನೇರ ಸಂದರ್ಶನ

ಮಡಿಕೇರಿ: ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 10 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ಕಲ್ಯಾಣಿ ಮೋಟಾರ್ಸ್ ಅರೆನಾ ಶೋರೂಮ್, ಬಸಪ್ಪ ಥಿಯೇಟರ್ ಬಿಲ್ಡಿಂಗ್, ದಾಸವಾಳ ರಸ್ತೆ, ವಿವಸ್ ಆಸ್ಪತ್ರೆ ಎದುರು, ಮಡಿಕೇರಿ, ಇಲ್ಲಿ “ನೇರ ಸಂದರ್ಶನ ನಡೆಯಲಿದೆ.

ಈ ನೇರ ಸಂದರ್ಶನದಲ್ಲಿ ಕಲ್ಯಾಣಿ ಮೋಟಾರ್ಸ್ ಮಾರುತಿ ಸುಜುಕಿ ಅರೆನಾ ಹಾಗೂ ನೆಕ್ಸಾ-ಮಡಿಕೇರಿ, ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಈ ನೇರ ಸಂದರ್ಶನದಲ್ಲಿ ರಿಲೇಷನ್‍ಶಿಪ್ ಮ್ಯಾನೆಜರ್, ಆಫೀಸ್ ಬಾಯ್, ಕಾರ್ ಕೇರ್ ಎಕ್ಸಿಕ್ಯೂಟಿವ್, ಟೆಕ್‍ನಿಷಿಯನ್ಸ್, ಹಾಗೂ ಸರ್ವಿಸ್ ಅಡ್ವೈಸರ್‍ಗಳು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹುದ್ದೆಗೆ ಪಿಯುಸಿ, ಪದವಿ, ಡಿಪ್ಲೋಮಾ ಹಾಗೂ ಐಟಿಐ ವಿದ್ಯಾರ್ಹತೆ ಹೊಂದಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಪುರುಷ ಅಭ್ಯರ್ಥಿಗಳಿಗೆ ಡಿಎಲ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.

ವಯೋಮಿತಿ: 20 ರಿಂದ 35 ವರ್ಷಗಳು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿಯವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್ 8296020826 ಇವರನ್ನು ಸಂಪರ್ಕಿಸಬಹುದು ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.

ಸೆ.08 ರಂದು ವಿದ್ಯುತ್ ವ್ಯತ್ಯಯ

ಮಡಿಕೇರಿ: 66/33/11 ಕೆ.ವಿ. ಎಂಯುಎಸ್‍ಎಸ್ ಮಗ್ಗುಲ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಮಾರ್ಗದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ನಡೆಸಬೇಕಿರುವುದರಿಂದ ಸೆಪ್ಟೆಂಬರ್ 8 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ವಿರಾಜಪೇಟೆ ಪಟ್ಟಣ, ಬಿಟ್ಟಂಗಾಲ, ಬಿ.ಶೆಟ್ಟಿಗೇರಿ, ಆರ್ಜಿ, ಬೇಟೋಳಿ, ಕದನೂರು, ಕಾಕೋಟುಪರಂಬು, ಕೆದಮುಳ್ಳೂರು, ಅಮ್ಮತ್ತಿ, ಕಾರ್ಮಾಡು, ಸಿದ್ದಾಪುರ, ಮಾಲ್ದಾರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

ಅರ್ಜಿ ಆಹ್ವಾನ

ಮಡಿಕೇರಿ: ಪ್ರಸಕ್ತ (2026-27) ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ(ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸಿನ  ವಿದ್ಯಾರ್ಥಿಗಳಿಗೆ ಮಾತ್ರ)  ಪ್ರವೇಶಕ್ಕಾಗಿ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ಆನ್‍ಲೈನ್ ಮೂಲಕ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

2026-27 ನೇ ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿನಿಲಯ ಮಡಿಕೇರಿ ಹಾಗೂ ಕುಶಾಲನಗರದ ವಿದ್ಯಾರ್ಥಿ ನಿಲಯಗಳಿಗೆ (ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ)  ಪ್ರವೇಶಾತಿ ಅರ್ಜಿಗಳನ್ನು ಆನ್‍ಲೈನ್‍ನ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ https://shp.karnataka.gov.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಲು ಈ ಮೂಲಕ ಕೋರಿದೆ. ಹೊಸ ವಿದ್ಯಾರ್ಥಿಗಳು ಸೆಪ್ಟೆಂಬರ್, 30 ರವರೆಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ. 08272-225528/ 220214, ನಿಲಯಪಾಲಕರು ಮಡಿಕೇರಿ:- 9742116601, ನಿಲಯಪಾಲಕರು ಕುಶಾಲನಗರ:  9945960004, ತಾಲ್ಲೂಕು ಮಾಹಿತಿ ಕೇಂದ್ರ ಸೋಮವಾರಪೇಟೆ ದೂ.ಸಂ. 8548068519 ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್‍ಎಂಸಿ ಕಾಲೇಜು ಹತ್ತಿರ, ಮಡಿಕೇರಿ ದೂ.ಸಂ. 9972799091 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಿ.ಎಸ್.ಸಚಿನ್ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular