HomeLatest Newsಕಮಲ್ ಹಾಸನ್ ಭಾವಚಿತ್ರಕ್ಕೆ ಬೆಂಕಿ: ಎಫ್ಐಆರ್ ದಾಖಲು

ಕಮಲ್ ಹಾಸನ್ ಭಾವಚಿತ್ರಕ್ಕೆ ಬೆಂಕಿ: ಎಫ್ಐಆರ್ ದಾಖಲು

ಬೆಂಗಳೂರು: ನಟ ಕಮಲ್ ಹಾಸನ್ ಅವರ ಭಾವಚಿತ್ರಕ್ಕೆ ಬೆಂಕಿ ಹಾಕಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಕರುನಾಡ ಯುವ ಸೇನೆ ಕಾರ್ಯಕರ್ತ ವಿ. ರವಿಕುಮಾರ್ ವಿರುದ್ಧ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಪೊಲೀಸ್ ಸಿಬ್ಬಂದಿ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಸವೇಶ್ವರನಗರದ ಕೆ.ಹೆಚ್.ಬಿ. ರಸ್ತೆಯ ಹಾವನೂರು ಸರ್ಕಲ್ ಪವಿತ್ರ ಪ್ಯಾರಡೈಸ್ ಬಳಿ ಕಮಲ್ ಹಾಸನ್ ಅವರ ಭಾವಚಿತ್ರಕ್ಕೆ ಆರೋಪಿ ಬೆಂಕಿ ಹಾಕಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಣೆಗುರುವನಹಳ್ಳಿಯ ರವಿಕುಮಾರ್ ನನ್ನು ವಶಕ್ಕೆ ಪಡೆಯಲಾಗಿದೆ.

ತಮಿಳುನಿಂದ ಕನ್ನಡ ಹುಟ್ಟಿದೆ ಎಂದು ಕಮಲ್ ಹಾಸನ್ ಹೇಳಿಕೆ ನೀಡಿದ್ದು, ಅವರು ತಮ್ಮ ಹೇಳಿಕೆ ವಾಪಸ್ ಪಡೆದು ಕ್ಷಮೆ ಕೋರಬೇಕೆಂದು ವಿವಿಧ ಕನ್ನಡ ಸಂಘಟನೆಗಳು ಆಗ್ರಹಿಸಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular