ಮುಂದಿನ ವರ್ಷದಿಂದ ಮೈಸೂರು ದಸರಾ ಕ್ರೀಡಾಕೂಟದಲ್ಲಿ ‘ಕಂಬಳ’ ಆಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಮಂಗಳೂರು: ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಬಳ ಆಯೋಜಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.

ಮಂಗಳೂರಿನ ಗುರುಪುರದ ಕಂಬಳದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಮುಂದಿನ ವರ್ಷದಿಂದಲೇ ದಸರಾ ಕ್ರೀಡಾಕೂಟದಲ್ಲಿ ಕಂಬಳ ಸ್ಪರ್ಧೆ ಆಯೋಜಿಸಲಾಗುವುದು ಎಂದು ಹೇಳಿದ್ದಾರೆ.

ದಸರಾ ಕ್ರೀಡಾಕೂಟದಲ್ಲಿ ಕಂಬಳ ಸ್ಪರ್ಧೆ ಆಯೋಜಿಸುವ ಕುರಿತಾಗಿ ಮುಖ್ಯಮಂತ್ರಿಗಳು ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಮಾತುಕತೆ ನಡೆಸುತ್ತೇನೆ. ಕಂಬಳ ಅಂತರರಾಷ್ಟ್ರೀಯ ಕ್ರೀಡೆಯಾಗಿ ಬೆಳೆಯಬೇಕು. ಇದಕ್ಕಾಗಿ ದಸರಾ ಕ್ರೀಡಾಕೂಟದಲ್ಲಿ ಪ್ರತಿ ವರ್ಷ ಕಂಬಳ ನಡೆಯಬೇಕು. ಮೂರು ಎಕರೆ ಜಾಗವನ್ನು ನಿಗದಿಪಡಿಸಿ ಶಾಶ್ವತ ಕಂಬಳ ಕೆರೆ ನಿರ್ಮಿಸಬೇಕು. ಇದಕ್ಕಾಗಿ ಅನುದಾನ ಕಾಯ್ದಿರಿಸಲು ವ್ಯವಸ್ಥೆ ಮಾಡುತ್ತೇನೆ. ಬೆಂಗಳೂರು ಮಾದರಿಯಲ್ಲಿ ಮೈಸೂರಿನಲ್ಲಿ ಕಂಬಳ ಸ್ಪರ್ಧೆ ನಡೆಸಬೇಕು ಎಂದು ಹೇಳಿದ್ದಾರೆ.

ದಕ್ಷಿಣ ಕನ್ನಡದ ಧಾರ್ಮಿಕ ಚಿಂತನೆಗಳ ಮೇಲೆ ಜಗತ್ತಿಗೇ ಅಪಾರ ನಂಬಿಕೆ ಇದೆ. ಸೋಲುವುದು ಹೇಗೆಂದು ಕಲಿಯದಿದ್ದರೆ ಗೆಲ್ಲಲು ಸಾಧ್ಯವಿಲ್ಲ. ಹಾಗೇ ಈ ಕಂಬಳ ಕ್ರೀಡೆಯಲ್ಲಿ ಹೃದಯವಂತಿಕೆ ಮುಖ್ಯವಾಗಿರಲಿ. ಕಂಬಳ ಕ್ರೀಡೆಯಿಂದ ನಮ್ಮ ಸಂಪ್ರದಾಯ- ಪರಂಪರೆ ಬೆಳೆಯುತ್ತಿದೆ. ನಮ್ಮ ಸರ್ಕಾರ ಇದಕ್ಕೆ ಪ್ರೋತ್ಸಾಹ ನೀಡುತ್ತದೆ ಎಂದರು.

ಮುಂದಿನ ವರ್ಷ ನಾಡ ಹಬ್ಬ ಮೈಸೂರು ದಸರಾದ ಕ್ರೀಡಾಕೂಟದಲ್ಲಿ ಕಂಬಳ ಆಯೋಜಿಸುತ್ತೇವೆ. ಮುಂದೆ ಇದು ಪರಂಪರೆಯಾಗಿ ಉಳಿದು ಮುಂದುವರಿಯಬೇಕು. ಈ ಕ್ರೀಡೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಬೇಕಿದೆ. ಪಕ್ಷ, ಭೇದ, ಜಾತಿ ಮರೆತು ಈ ಕ್ರೀಡೆಯನ್ನು ಬೆಳೆಸೋಣ, ಪ್ರೋತ್ಸಾಹಿಸೋಣ. ಇದಕ್ಕೆ ನಾನು, ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read