HomeLatest Newsಕಂಬಳ ಆಯೋಜಕರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ

ಕಂಬಳ ಆಯೋಜಕರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ

ಉಡುಪಿ: ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜಿಸುವ ವಿಚಾರವಾಗಿ ಪರ-ವಿರೋಧ ಚರ್ಚೆಗಳು ನಡೆಯುತ್ತಿರುವ ನಡುವೆಯೇ ರಾಅಜ್ಯ ಸರ್ಕಾಅರ ಕಂಬಳ ಆಯೋಜಕರಿಗೆ ಗುಡ್ ನ್ಯೂಸ್ ನೀಡಿದೆ. 2025-26ನೇ ಸಾಲಿನ ಕರಾವಳಿಯಲ್ಲಿ ನಡೆಯುವ 23 ಕಂಬಳಗಳಿಗೆ ಅನುದಾನ ಘೋಷಣೆ ಮಾಡಿದೆ.

ಕರಾವಳಿಯಲ್ಲಿ ನಡೆಯಲಿರುವ 23 ಕಂಬಳಗಳಿಗೆ ತಲಾ 5 ಲಕ್ಷ ರೂ ಅಂತೆ ಒಟ್ಟು 1 ಕೋಟಿ 15 ಲಕ್ಷ ರೂ ಅನುದಾನ ಘೋಷಣೆ ಮಾಡಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಲಾಗಿದ್ದು, ಸರ್ಕಾರದ ಈ ನಿರ್ಧಾರವನ್ನು ಕಂಬಳ ಸಂಘಟಕರು ಸ್ವಾಗತಿಸಿದ್ದಾರೆ.

ಕಂಬಳಕ್ಕೆ ಅನುದಾನ ಬಿಡುಗಡೆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ, ರಾಜ್ಯ ಸರ್ಕಾರ ನುಡಿದಂತೆ ನಡೆದಿದೆ. ಸಿಎಂ ಡಿ.ಕೆ.ಶಿವಕುಮಾರ್ ಕಂಬಳ ಆಯೋಜಕರಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಪ್ರತಿ ಕಂಬಳಕ್ಕೂ 5 ಲಕ್ಷ ರೂ ಅನುದಾನ ಕೊಟ್ಟಿದ್ದಾರೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ 23 ಕಂಬಳಗಳಿಗೆ ಇದರಿಂದ ಅನುಕೂಲವಾಗಲಿದೆ. ಕಂಬಳ ಆಯೋಜನೆ ದೊಡ್ಡ ಹೊರೆ. ಸಂಪ್ರದಾಯ ಸಂಸ್ಕೃತಿ ತುಳುನಾಡಿನ ಕೀರ್ತಿಯನ್ನು ಎತ್ತರಕ್ಕೆ ತೆಗೆದುಕೊಂಡು ಹೋಗಲು ಇದರಿಂದ ಅನುಕೂಲವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಪ್ರವಾಸೋದ್ಯಮ ಮತ್ತು ಕ್ರೀಡಾ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಿದ್ದರು. ಸದಾನಂದ ಗೌಡರು ಸಿಎಂ ಆಗಿದ್ದಾಗ 1 ಕೋಟಿ ರೂ ಅನುದಾನ ಕೊಟ್ಟಿದ್ದರು. ರಾಜಕೀಯ ಭೇದವಿಲ್ಲದೆ ಎಲ್ಲಾ ಸರ್ಕಾರಗಳು ಕಂಬಳವನ್ನು ಪೋಷಿಸಿವೆ. ಇದು ಕಂಬಳಕ್ಕೆ ಸರ್ಕಾರಗಳು ಕೊಟ್ಟ ಗೌರವ. ಮುಂದಿನ ಬಜೆಟ್​ನಲ್ಲಿ ಕಂಬಳಕ್ಕೆ 5 ಕೋಟಿ ರೂ ಅನುದಾನ ಮೀಸಲಿರಿಸುವಂತೆ ಮನವಿ ಮಾಡಿದ್ದಾರೆ.

ಇದೇ ವೇಳೆ ಮೈಸೂರು ದಸರಾದಲ್ಲಿ ಕಂಬಳ ವಿವಾದ ವಿಚಾರವಾಗಿ ಮಾತನಾಡಿದ ದೇವಿಪ್ರಸಾದ್ ಶೆಟ್ಟಿ, ಕಂಬಳದಲ್ಲಿ ರಾಜಕೀಯ ಇಲ್ಲ. ರಾಜಕೀಯ ಧರ್ಮ ಮೀರಿ ನಡೆಯುವ ಕ್ರೀಡೆ. ಎಲ್ಲಾ ರಾಜಕೀಯ ಪಕ್ಷದವರು ಕಂಬಳ ನಡೆಸುತ್ತಾರೆ. ಮೈಸೂರು ಸಂಸದರು ವಿರೋಧ ಮಾಡುತ್ತಾರೆ ಎಂಬ ಕಾರಣಕ್ಕೆ ಅವರ ಪಕ್ಷದ ಕರಾವಳಿಯ ಶಾಸಕರು ವಿರೋಧ ಮಾಡುವುದು ಸರಿಯಲ್ಲ. ಒಂದು ಪಕ್ಷದ ಪರವಾಗಿ ನಿಲ್ಲುವು ತೆಗೆದುಕೊಂಡಿದ್ದೀರಿ, ಕಂಬಳ ನಿಮಗೆ ಗೌರವ ಕೊಟ್ಟಿದೆ, ನೀವೇನು ಕಂಬಳಕ್ಕೆ ಗೌರವ ತಂದಿಲ್ಲ. ಕಂಬಳದ ಗೌರವವನ್ನು ರಾಜ್ಯಾದ್ಯಂತ ಎತ್ತಿಹಿಡಿರಿ. ಕಂಬಳ ನಮ್ಮ ಜಿಲ್ಲೆಗೆ ಮಾತ್ರ ಸೀಮಿತವೇ, ಮೈಸೂರಿನಲ್ಲಿ ಏಕೆ ಕಂಬಳ ಆಗಬಾರದು? ಎಂದು ಪ್ರಶ್ನಿಸಿದರು.

ಕಂಬಳದ ಬಗ್ಗೆ ಅನಗತ್ಯವಾಗಿ ಅಪಪ್ರಚಾರವಾಗುತ್ತಿದೆ. ಕೆಳ ವರ್ಗದವರ ದಬ್ಬಾಳಿಕೆ ಎಂದು ಬಿಂಬಿಸಲಾಗುತ್ತಿದೆ. ಹಿಂದುಳಿದ ವರ್ಗದ ಕೋಟೆ ಚೆನ್ನಯ್ಯರ ಹೆಸರಲ್ಲಿ, ಸೂರ್ಯ ಚಂದ್ರರ ಹೆಸರಲ್ಲಿ, ಕಾಂತ ಬಾರೆ ಬೂದ ಬಾರೆ ಹೆಸರಲ್ಲಿ ಕಂಬಳ ಮಾಡುತ್ತೇವೆ. ಇದು ದೇಶಕ್ಕೆ ಮಾದರಿ ವ್ಯವಸ್ಥೆ. ನಮ್ಮ ಕಂಬಳವನ್ನು ವೈಭವೀಕರಿಸುವ ಕೆಲಸವನ್ನು ಕರಾವಳಿಯ ಜನಪ್ರತಿನಿಧಿಗಳು ಧೈರ್ಯದಿಂದ ಮಾಡಿ. ಆದ್ದರಿಂದ ಕರಾವಳಿಯ ಜನಪ್ರತಿನಿಧಿಗಳು ಯಾವುದೇ ಪಕ್ಷದ ಕೈಗೊಂಬೆಗಳಾಗದೆ ಕಂಬಳದ ವೈಭವವನ್ನು ರಾಜ್ಯಾದ್ಯಂತ ಎತ್ತಿಹಿಡಿಯಲು ಧೈರ್ಯದಿಂದ ಕೆಲಸ ಮಾಡಬೇಕು ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular