HomeEntertainmentBIG NEWS: ಕರ್ನಾಟಕ ಬಂದ್ ಗೆ ಸ್ಯಾಂಡಲ್ ವುಡ್ ಬೆಂಬಲ; ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ...

BIG NEWS: ಕರ್ನಾಟಕ ಬಂದ್ ಗೆ ಸ್ಯಾಂಡಲ್ ವುಡ್ ಬೆಂಬಲ; ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ನಾಳೆ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಬಲ ಘೋಷಿಸಿದೆ. ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.

ನಟ ಶಿವರಾಜ್ ಕುಮಾರ್ ಭೇಟಿ ಬಳಿಕ ಮಾತನಾಡಿದ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ.ಸುರೇಶ್, ಕರ್ನಾಟಕ ಬಂದ್ ಗೆ ಕನ್ನಡ ಚಿತ್ರರಂಗ ಬೆಂಬಲ ಘೋಷಿಸಿದೆ. ಕಾವೇರಿ ನೀರಿಗಾಗಿ ಹೋರಾಟಕ್ಕೆ ಶಿವರಾಜ್ ಕುಮಾರ್ ಬೆಂಬಲಿಸುವುದಾಗಿ ಹೇಳಿದ್ದಾರೆ. ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿಭಟನೆಯಲ್ಲಿ ಚಿತ್ರರಂಗದ ನಟ-ನಟಿಯರು ಭಾಗವಹಿಸಲಿದ್ದಾರೆ. ವಿಜಯ್ ರಾಘವೇಂದ್ರ, ಶ್ರೀಮುರುಳಿ, ಧ್ರುವ ಸರ್ಜಾ, ಪ್ರೇಮ್, ಅಜಯ್ ರಾವ್, ವಿನೋದ್ ಪ್ರಭಾಕರ್, ಮಾಲಾಶ್ರೀ, ಶೃತಿ, ಪ್ರೇಮಾ ಸೇರಿದಂತೆ ಎಲ್ಲರಿಗೂ ಆಹ್ವಾನಿಸಲಾಗಿದೆ. ಎಲ್ಲರೂ ಭಾಗವಹಿಸುವ ನಿರೀಕ್ಷೆ ಇದೆ. ಶಿವಣ್ಣ ಬರ್ತೀನಿ ಎಂದ ಮೇಲೆ ನಮಗೆ ಆನೆಬಲ ಸಿಕ್ಕಂತಾಗಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular