HomeIndiaಕಾಂಚನಜುಂಗಾ ಎಕ್ಸ್ ಪ್ರೆಸ್ ಅಪಘಾತ ಸ್ಥಳಕ್ಕೆ ಅಶ್ವಿನಿ ವೈಷ್ಣವ್ ಭೇಟಿ

ಕಾಂಚನಜುಂಗಾ ಎಕ್ಸ್ ಪ್ರೆಸ್ ಅಪಘಾತ ಸ್ಥಳಕ್ಕೆ ಅಶ್ವಿನಿ ವೈಷ್ಣವ್ ಭೇಟಿ

ಕೊಲ್ಕತ್ತ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ರಂಗಪಾಣಿ ನಿಲ್ದಾಣದ ಬಳಿ ನಿಂತಿದ್ದ ಕಾಂಚನಜುಂಗಾ ಎಕ್ಸ್‌ ಪ್ರೆಸ್‌ಗೆ ವೇಗವಾಗಿ ಬಂದ ಸರಕು ಸಾಗಣೆ ರೈಲು ಸೋಮವಾರ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಸ್ಥಳಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಆಗಮಿಸಿ ಪರಿಸ್ಥಿತಿ ಅವಲೋಕಿಸಿದರು.

ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಇದು ಮುಖ್ಯ ಮಾರ್ಗವಾಗಿರುವುದರಿಂದ ಈಗ ಹಳಿಗಳ ಮರುಸ್ಥಾಪನೆಯತ್ತ ಗಮನ ಹರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ನಂತರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸಿಲಿಗುರಿಯ ಉತ್ತರ ಬಂಗಾಳ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿ ಗಾಯಾಳುಗಳನ್ನು ಭೇಟಿ ಮಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತದಲ್ಲಿ ಕನಿಷ್ಠ 9 ಜನರು ಸಾವನ್ನಪ್ಪಿದ್ದಾರೆ ಮತ್ತು 60 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಂತ್ರಸ್ತರಿಗೆ ಪರಿಹಾರ ಪರಿಹಾರ ನೀಡಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular