HomeLatest NewsBIG NEWS: ಕನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿಗೆ ಮತ್ತೊಂದು ಶಾಕ್

BIG NEWS: ಕನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿಗೆ ಮತ್ತೊಂದು ಶಾಕ್

ಬೆಂಗಳೂರು: ಲಿಂಗಾಯಿತ ಮಠಗಳ ಒಕ್ಕೂಟದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರಿಗೆ ಬೆಂಗಳೂರಿನ 31ನೇ ಸಿಸಿಹೆಚ್ ಕೋರ್ಟ್ ಮತ್ತೊಂದು ಶಾಕ್ ನೀಡಿದೆ.

ಲಿಂಗಾಯಿತ ಮಠಗಳ ಒಕ್ಕೂಟ ಸ್ವಾಮಿಜಿ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ನಿರ್ಬಂಧ ವಿಧಿಸಿ ಮಧ್ಯಂತರ ಆದೇಶ ಹೊರಡಿಸಿದೆ.

ಲಿಂಗಾಯಿತ ಮಠಗಳ ಒಕ್ಕೂಟದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಕನೇರಿ ಶ್ರೀಗಳ ವಿರುದ್ಧ ಲಿಂಗಾಯಿತ ಮಠಗಳ ಒಕ್ಕೂಟ 1 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಅರ್ಜಿ ಸಲ್ಲಿಸಿತ್ತು. ಸ್ವಾಮೀಜಿಗಳ ಹೇಳಿಕೆಯಿಂದ ಲಿಂಗಾಯಿತ ಒಕ್ಕೂಟದ ಗೌರವಕ್ಕೆ ಧಕ್ಕೆಯಾಗಿದೆ. ಇಂತಹ ಹೇಳಿಕೆ ನೀಡದಂತೆ ಸ್ವಾಮೀಜಿಗೆ ನಿಷೇಧ ಹೇರಿದೆ. ಅಲ್ಲದೇ ಸ್ವಾಮೀಜಿ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular